ನವದೆಹಲಿ : ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಎನ್ಟಿಎ ತಜ್ಞರೊಬ್ಬರನ್ನು ಬಂಧಿಸಿದ್ದಾರೆ.
ಸಿಬಿಐ ಅಧಿಕಾರಿಗಳು NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಆಯ್ದ ವಿದ್ಯಾರ್ಥಿಗಳಿಗೆ ಸೋರಿಕೆ ಮಾಡಿದ ಆರೋಪದ ಮೇಲೆ ಪುಣೆಯ ಉಪನ್ಯಾಸಕಿಯನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಉದ್ಯೋಗದಲ್ಲಿರುವ ಆರೋಪಿ ಮನೀಷಾ ಸಂಜಯ್ ಹವಾಲ್ದಾರ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಜ್ಞರಾಗಿ ನೇಮಕಗೊಂಡಿದ್ದರು. ಕೇಂದ್ರೀಯ ಸಂಸ್ಥೆಯ ವಿಚಾರಣೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ.
ಮೇ 16 ರಂದು ಅರೆಸ್ಟ್ ಆದ ಸಹ-ಆರೋಪಿ ಮನೀಷಾ ಮಾಂಧರೆ ಜೊತೆ ನೀಟ್ ಯುಜಿ ಪರೀಕ್ಷೆಯ ಹಲವಾರು ಭೌತಶಾಸ್ತ್ರ ಪ್ರಶ್ನೆಗಳನ್ನು ಹಂಚಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.
ಇದನ್ನೂ ಓದಿ : ದೇಶದ ಜನರಿಗೆ ಮತ್ತೆ ದರ ಏರಿಕೆ ಶಾಕ್ – ಪೆಟ್ರೋಲ್ 87, ಡೀಸೆಲ್ 91 ಪೈಸೆ ಹೆಚ್ಚಳ!
Author: Btv Kannada
Post Views: 256








