ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಭೀಕರ ಅಪಘಾತವು ಬುಧವಾರ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್ ಚಲಾಯಿಸುತ್ತಿದ್ದರು.
ಅತಿಥಿ ಪ್ರಯಾಣಿಕರಾಗಿ ಭಾರತೀಯ ಸೇನೆಯ 3ನೇ ಇನ್‌ಫಾಂಟ್ರಿ ಡಿವಿಷನ್‌ನ ಜನರಲ್ ಆಫೀಸರ್ ಕಮಾಂಡಿಂಗ್ (GOC) ಆಗಿರುವ ಮೇಜರ್ ಜನರಲ್ ಸಚಿನ್ ಮೆಹ್ತಾ ಅವರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಮೂವರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಸದ್ಯ ಅಪಘಾತಕ್ಕೆ ನಿಖರ ಕಾರಣ ಏನೆಂಬುದನ್ನು ಪತ್ತೆಹಚ್ಚಲು ಉನ್ನತ ಮಟ್ಟದ ತನಿಖೆಗೆ (Probe) ಆದೇಶಿಸಲಾಗಿದೆ.
ಇದನ್ನೂ ಓದಿ : ಮಾದಾವರ-ತುಮಕೂರು ಮೆಟ್ರೋ ಯೋಜನೆ – ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ!









