ದೇಶದ 51 ಸಾವಿರ ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರೋಜ್‌ಗಾರ್​​ ಮೇಳದಲ್ಲಿ 51,000ಕ್ಕೂ ಹೆಚ್ಚು ಯುವಕರಿಗೆ ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಪತ್ರಗಳನ್ನು ವರ್ಚುವಲ್ ಆಗಿ ವಿತರಿಸಿದರು.

ದೇಶದ 51,000ಕ್ಕೂ ಹೆಚ್ಚು ಯುವಕರಿಗೆ ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದ್ದಾರೆ. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ಇಂದು ದೇಶಾದ್ಯಂತ ಸಾವಿರಾರು ಯುವಕರಿಗೆ ಬಹಳ ಮುಖ್ಯವಾದ ದಿನವಾಗಿದೆ ಎಂದರು.

ಇಂದು ನೇಮಕಗೊಂಡ ಎಲ್ಲಾ ಯುವಕರು ದೇಶದ ಅಭಿವೃದ್ಧಿಯ ಪ್ರಯಾಣದಲ್ಲಿ ಪ್ರಮುಖ ಪಾಲುದಾರರಾಗುತ್ತಿದ್ದಾರೆ. ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ, ಶಿಕ್ಷಣ ಮತ್ತು ಇತರೆ ಹಲವು ಕ್ಷೇತ್ರಗಳಲ್ಲಿ, ಎಲ್ಲಾ ಯುವಕರು ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ರೋಜ್‌ಗಾರ್ ಮೇಳವು ಯುವ ಶಕ್ತಿಯನ್ನು ಹೊಸ ಅವಕಾಶಗಳೊಂದಿಗೆ ಸಬಲೀಕರಣಗೊಳಿಸುವ ನಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಭಾರತದ ಯುವಜನರು ಮತ್ತು ತಾಂತ್ರಿಕ ಪ್ರಗತಿಯ ಬಗ್ಗೆ ಜಗತ್ತು ತುಂಬಾ ಉತ್ಸುಕವಾಗಿದೆ. ಇಂದು, ಜಗತ್ತು ಭಾರತದ ಅಭಿವೃದ್ಧಿ ಪ್ರಯಾಣದ ಭಾಗವಾಗಲು ಬಯಸುತ್ತದೆ ಎಂದರು.

ಇದನ್ನೂ ಓದಿ : ಜೆಡಿಎಸ್ ನಾಯಕನಿಗೆ ಹನಿಟ್ರ್ಯಾಪ್ ಮಾಡುತ್ತಿದ್ದಾರಾ ಗುಬ್ಬಿ ಎಂಎಲ್ಎ ಶ್ರೀನಿವಾಸ್?

Btv Kannada
Author: Btv Kannada

Leave a Comment

Read More