ಬೆಂಗಳೂರಿಗೆ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಭೇಟಿ – ಇಂದು ನಾಯಕರೊಂದಿಗೆ ಹೈವೋಲ್ಟೇಜ್ ಮೀಟಿಂಗ್‌!

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಹಿರಿಯ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಪ್ರಮುಖ ನಾಯಕರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಇಂದು ಪಕ್ಷದ ಕಚೇರಿಯಲ್ಲಿ ನಿತಿನ್ ನಬಿನ್ ಅವರು ಸರಣಿ ಹೈವೋಲ್ಟೇಜ್ ಮೀಟಿಂಗ್‌ಗಳನ್ನು ನಡೆಸಲಿದ್ದಾರೆ. ರಾಜ್ಯದ ಹಾಲಿ-ಮಾಜಿ ಶಾಸಕರು, ಸಂಸದರು, ಎಂಎಲ್‌ಸಿಗಳು ಹಾಗೂ ಪದಾಧಿಕಾರಿಗಳ ಜೊತೆ ಅವರು ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಸಂಜೆ ರಾಜ್ಯ ಕೋರ್ ಕಮಿಟಿ ಸಭೆಯೂ ನಡೆಯಲಿದೆ.

ನಿತಿನ್ ನಬಿನ್ ಅವರು ರಾಜ್ಯಸಭೆ ಮತ್ತು ವಿಧಾನಪರಿಷತ್‌ ಚುನಾವಣೆಗಳು, ಮುಂಬರುವ ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಬಗ್ಗೆಯೂ ರಾಜ್ಯದ ನಾಯಕರೊಂದಿಗೆ ಚರ್ಚಿಸಲಿದ್ದಾರೆ.

ಇದನ್ನೂ ಓದಿ : ಅಮೆರಿಕದ ಶ್ವೇತಭವನ ಬಳಿ ಗುಂಡಿನ ದಾಳಿ – ಪ್ರತಿದಾಳಿಗೆ ಬಂದೂಕುಧಾರಿ ಸಾವು!

Btv Kannada
Author: Btv Kannada

Leave a Comment

Read More

Read More