ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಸೀಸನ್ 11 ಅದ್ಧೂರಿಯಾಗಿ ಆರಂಭಗೊಂಡಿದೆ. ಈ ಬಾರಿ ಬಿಗ್ಬಾಸ್ನಲ್ಲಿ ಸ್ವರ್ಗ-ನರಕ ಅಂತ ಎರಡು ಮನೆಗಳನ್ನು ಮಾಡಲಾಗಿದೆ. ಈಗಾಗಲೇ ಸ್ಪರ್ಧಿಗಳು ಒಬ್ಬರೊನ್ನೊಬ್ಬರು ಟಾರ್ಗೆಟ್ ಮಾಡಲು ಶುರು ಮಾಡಿದ್ದಾರೆ. ಇದರ ನಡುವೆ ಜಗಳಗಳು ನಡೆಯುತ್ತಿವೆ.
ಚೈತ್ರಾ ಕುಂದಾಪುರ, ಗೌತಮಿ, ಭವ್ಯಾ, ಹಂಸ, ಶಿಶಿರ್, ಯಮುನಾ, ಜಗದೀಶ್, ಮಾನಸ, ಮೋಕ್ಷಿತಾ ಅವರು ಮೊದಲ ವಾರ ನಾಮಿನೇಟ್ ಆಗಿದ್ದಾರೆ. ಆದರೆ ನಾಮಿನೇಟ್ ಆದ ಸ್ಪರ್ಧಿಗಳಿಗೆ ಬಿಗ್ ಬಾಸ್ ಟಾಸ್ಕ್ವೊಂದನ್ನು ಕೊಟ್ಟಿದ್ದು, ಪಾರಾಗಲು ಅವಕಾಶವೊಂದನ್ನು ನೀಡಿದ್ದಾರೆ.
ಈ ಟಾಸ್ಕ್ಗೆ ಧನ್ರಾಜ್ ಆಚಾರ್ ಟಾಸ್ಕ್ ರೆಫ್ರಿಯಾಗಿದ್ದಾರೆ. ಆದರೆ ಜಗದೀಶ್ ಮತ್ತು ಯಮುನಾ ಟಾಸ್ಕ್ ವೇಳೆ ಡಿಕ್ಕಿ ಹೊಡೆದಿದ್ದು, ಯಮುನಾ ನೆಲಕ್ಕೆ ಬಿದ್ದಿದ್ದಾರೆ. ಇಲ್ಲಿಂದ ಟಾಸ್ಕ್ ರೆಫ್ರಿ ಮತ್ತು ಜಗದೀಶ್ ನಡುವೆ ಜಗಳ ಶುರುವಾಗಿದೆ.
ಧನ್ರಾಜ್ ಮತ್ತು ಜಗದೀಶ್ ಮಾತು ಮಾತು ಬೆಳೆಸಿದ್ದಾರೆ. ಈ ವೇಳೆ ಜಗದೀಶ್ ಅರ್ಹವಾದ ರೆಫ್ರಿ ಇವನಲ್ಲ ಎಂದು ಧನ್ರಾಜ್ಗೆ ಹೇಳಿದ್ದಾರೆ. ಇದಕ್ಕೆ ಸಿಟ್ಟಿಗೆದ್ದ ಧನ್ರಾಜ್ ಸುಮ್ಮೆ ಕೂತ್ಕೊತೀಯಾ.. ನೀನು ಯಾರು ಹೇಳೋಕೆ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಇಂದಿನ ಎಪಿಸೋಡ್ ಮಜವಾಗಿದ್ದು, ನಾಮಿನೇಶನ್ನಿಂದ ಯಾರು ಪಾರಗುತ್ತಾರೆ ಎಂದು ಕಾದುನೋಡಬೇಕಾಗಿದೆ.
ಇದನ್ನೂ ಓದಿ : ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡುವಾಗ ಅವಘಡ – ಸಿಎಂ ಸಿದ್ದು ಕೈಗೆ ತಾಗಿದ ಬೆಂಕಿ..!