ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್ – ಸಬ್​ ಇನ್ಸ್​ಪೆಕ್ಟರ್ ಸೇರಿ 6 ಮಂದಿ ಪೊಲೀಸರು ಸಸ್ಪೆಂಡ್!

ಬೆಂಗಳೂರು : ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್ ಸಂಬಂಧ ಓರ್ವ ಸಬ್​ ಇನ್ಸ್​ಪೆಕ್ಟರ್ ಸೇರಿ 6 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಬಳಿ ಸ್ಫೋಟಕ ಪತ್ತೆ ಸಂಬಂಧ 6 ಮಂದಿ ಪೊಲೀಸರನ್ನು ಸಸ್ಪೆಂಡ್ ಮಾಡಿ ಬೆಂಗಳೂರು ದಕ್ಷಿಣ ಎಸ್​​ಪಿ ಶ್ರೀನಿವಾಸ್ ಗೌಡ ಆದೇಶಿಸಿದ್ದಾರೆ.

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಓರ್ವ ಪಿಎಸ್​ಐ, ಓರ್ವ ASI, ನಾಲ್ವರು ಕಾನ್ಸ್​​ಟೇಬಲ್​ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಇವರೆಲ್ಲರನ್ನೂ ಮೇ 10ರಂದು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸ್ಫೋಟಕ ಪತ್ತೆಯಾದ ಸ್ಥಳದ ಬಳಿಯೇ ಇವರು ಭದ್ರತೆ ನೋಡಿಕೊಳ್ಳುತ್ತಿದ್ದರು. ಹೀಗಾಗಿ ಅಲರ್ಟ್​​ ಇರಲಿಲ್ಲ ಮತ್ತು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣ ನೀಡಿ 6 ಮಂದಿಯನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ : ಸೆನ್ಸಾರ್ ಅಂಗಳಕ್ಕೆ ಕಾಲಿಟ್ಟ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ!

Btv Kannada
Author: Btv Kannada

Leave a Comment

Read More

Read More