ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 24 ಜನರು ಸಾವನ್ನಪ್ಪಿ, 100ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ಭದ್ರತಾ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಸ್ಫೋಟದ ತೀವ್ರತೆಗೆ ರೈಲು ಬೋಗಿಗಳು ಹಳಿ ತಪ್ಪಿದ್ದು, ಸ್ಥಳದಲ್ಲಿ ಭಾರೀ ಅಗ್ನಿ ಕಾಣಿಸಿಕೊಂಡಿದೆ. ಬಾಂಬ್ ಸ್ಫೋಟದ ಪರಿಣಾಮ ರೈಲ್ವೆ ಟ್ರ್ಯಾಕ್ ಬಳಿಯ ಮನೆಗಳಲ್ಲಿ ಪಾರ್ಕ್ ಮಾಡಿದ್ದ ಹತ್ತಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ರೈಲ್ವೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದ್ದು, ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ : ವೃದ್ಧೆಗೆ ಡಿಜಿಟಲ್ ಅರೆಸ್ಟ್ – 24 ಕೋಟಿ ರೂ. ದೋಚಿದ ಸೈಬರ್ ವಂಚಕರು!
Author: Btv Kannada
Post Views: 1,242








