ಬೆಂಗಳೂರು : ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲಾ ಕ್ರಾಸ್ ಸಮೀಪ ಇಂದಿನಿಂದ ಭಾರಿ ಸಂಚಾರ ವ್ಯತ್ಯಯ ಉಂಟಾಗಲಿದೆ. ನಾಲಾ ಕ್ರಾಸ್ ಬಳಿ ಹಳೆಯ ಕಲ್ಲಿನ ಕಲ್ವರ್ಟ್ ತೆರವುಗೊಳಿಸಿ ಹೊಸ RCC ಕಲ್ವರ್ಟ್ ನಿರ್ಮಾಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 60 ದಿನಗಳ ಕಾಲ ಕಾಮರಾಜ್ ರಸ್ತೆ ಬಂದ್ ಆಗಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಿಳಿಸಿದೆ.
ಸಾರ್ವಜನಿಕರು ಮತ್ತು ವಾಹನ ಸವಾರರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಲಾಗಿದ್ದು, ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಯಾವೆಲ್ಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ?
- ಕಾಮರಾಜ ರಸ್ತೆಯ ವಿಠೋಬಾ ದೇವಸ್ಥಾನದಿಂದ ನಾಲಾ ರಸ್ತೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
- ಕಾಮರಾಜ ರಸ್ತೆಯ ಕೆ.ಆರ್ ರಸ್ತೆ – ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಡಿಕನ್ಸನ್ ಜಂಕ್ಷನ್ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
ಪರ್ಯಾಯ ಮಾರ್ಗಗಳು :
- ಕಮರ್ಷಿಯಲ್ ಸ್ಟ್ರೀಟ್ ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಕಾಮರಾಜ ರಸ್ತೆಯ ವಿಠೋಬಾ ದೇವಸ್ಥಾನದ ಹತ್ತಿರ ಬಲ ತಿರುವು ಪಡೆದು ವೀರಪಿಳ್ಳೆ ಸ್ಟ್ರೀಟ್ ಮೂಲಕ ನಾಗಮ್ಮ ದೇವಸ್ಥಾನದ ಹತ್ತಿರ ಎಡ ತಿರುವು ಪಡೆದು ಸೇಂಟ್ ಜಾನ್ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸಬಹುದಾಗಿದೆ.
- ಕಬ್ಬನ್ ರಸ್ತೆ ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಕೆ.ಆರ್ ರಸ್ತೆ ಕಬ್ಬನ್ ರಸ್ತೆ ಜಂಕ್ಷನ್ ಹತ್ತಿರ ಬಲ ತಿರುವು ಪಡೆದು ಕಬ್ಬನ್ ರಸ್ತೆಯ ಮೂಲಕ ತೆರಳಿ ಮಣಿಪಾಲ್ ಜಂಕ್ಷನ್ ಹತ್ತಿರ ಎಡ ತಿರುವು ಪಡೆದು ಡಿಕನ್ಸನ್ ರಸ್ತೆ ಮೂಲಕ ನೇರವಾಗಿ ತೆರಳಿ ಬ್ಲೂ ಸ್ಟೋನ್ ಹತ್ತಿರ ಬಲ ತಿರುವು ಪಡೆದುಕೊಂಡು ಸೇಂಟ್ ಜಾನ್ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸಬಹುದಾಗಿದೆ.
- ಡಿಸ್ಪೆನ್ಸರಿ ರಸ್ತೆ (ಆಲೀಸ್ ಜಂಕ್ಷನ್) ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಡಿಕನ್ಸನ್ ರಸ್ತೆಯ ಮೂಲಕ ನೇರವಾಗಿ ಚಲಿಸಿ ಬ್ಲೂ ಸ್ಟೋನ್ ಹತ್ತಿರ ಎಡ ತಿರುವು ಪಡೆದು ಸೇಂಟ್ ಜಾನ್ ರಸ್ತೆ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸಬಹುದಾಗಿದೆ.
ಇದನ್ನೂ ಓದಿ : ಕೇಂದ್ರ ಸಚಿವಾಲಯಗಳ ಪೈಕಿ ಪ್ರಹ್ಲಾದ್ ಜೋಶಿ ಇಲಾಖೆ ನಂಬರ್.1
Author: Btv Kannada
Post Views: 292









