Download Our App

Follow us

Home » ಮೆಟ್ರೋ » ಬೆಂಗಳೂರಲ್ಲಿ ಕೇಕ್ ತಿಂದು 5 ವರ್ಷದ ಮಗು ದುರಂತ ಸಾ*ವು – ಇಬ್ಬರ ಸ್ಥಿತಿ ಗಂಭೀರ..!

ಬೆಂಗಳೂರಲ್ಲಿ ಕೇಕ್ ತಿಂದು 5 ವರ್ಷದ ಮಗು ದುರಂತ ಸಾ*ವು – ಇಬ್ಬರ ಸ್ಥಿತಿ ಗಂಭೀರ..!

ಬೆಂಗಳೂರು : ಮನೆಯಲ್ಲಿ ಕೇಕ್‌ ತಿಂದು 5 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆ.ಪಿ.ಅಗ್ರಹಾರದ ಭುವನೇಶ್ವರಿ ನಗರದಲ್ಲಿ ನಡೆದಿದೆ. ತಂದೆ ತಂದುಕೊಟ್ಟಿದ ಕೇಕ್​ ತಿಂದು ಧೀರಜ್ (5) ಸಾವನ್ನಪ್ಪಿದ್ರೆ, ತಂದೆ ಬಾಲರಾಜ್, ತಾಯಿ ನಾಗಲಕ್ಷ್ಮಿ ಅಸ್ವಸ್ಥಗೊಂಡಿದ್ದಾರೆ.

ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರುವ ಬಾಲರಾಜ್ ನಿನ್ನೆ ಕೇಕ್​ ತಂದು ಧೀರಜ್​ಗೆ ಕೊಟ್ಟಿದ್ದಾರೆ. ಪೋಷಕರು ಮಗು ಧೀರಜ್​ ಜೊತೆ ಒಟ್ಟಿಗೆ ಕುಳಿತು ಕೇಕ್​ ತಿಂದಿದ್ದಾರೆ. ಬಳಿಕ ಫುಡ್​ ಪಾಯಿಸ್​ ಆಗಿ ದಿಢೀರ್ ಮೂವರು ಅಸ್ವಸ್ಥಗೊಂಡಿದ್ದಾರೆ.

ಇನ್ನು ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಮಗು ಅಸುನೀಗಿದ್ದು, ಆಸ್ಪತ್ರೆಯ ಐಸಿಯುನಲ್ಲಿ ತಂದೆ ಬಾಲರಾಜ್, ತಾಯಿ ನಾಗಲಕ್ಷ್ಮಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕೇಕ್​ ಎಲ್ಲಿಯದ್ದು ಅನ್ನೋದರ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇನ್ನು ಇಬ್ಬರಿಗೂ ಪ್ರಜ್ಞೆ ಬಂದ ಬಳಿಕ ಘಟನೆ ಬಗ್ಗೆ ಪೊಲೀಸರು ಮಾಹಿತಿ ಪಡೆಯಲು ಕಾಯುತ್ತಿದ್ದಾರೆ.

ಇದನ್ನೂ ಓದಿ : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಹಂಗಾಮಿ ಅಧ್ಯಕ್ಷರಾಗಿ ಜಗನ್ನಾಥ ಶೇಘ್ ಜೀ ಆಯ್ಕೆ..!

Leave a Comment

DG Ad

RELATED LATEST NEWS

Top Headlines

ಅರಣ್ಯ ಇಲಾಖೆಯಲ್ಲಿ ಲಂಚದ ರೇಟ್ ​ಕಾರ್ಡ್.. ಅಪ್ರೈಸಲ್ ಕಮಿಟಿಯಲ್ಲಿ ಲಕ್ಷ ಲಕ್ಷ ಲೂಟಿ..!

ಬೆಂಗಳೂರು : ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಸ್ಟೇಟ್ ಲೆವೆಲ್ ಎಕ್ಸ್​ಫರ್ಟ್​ ಅಪ್ರೈಸಲ್ ಕಮಿಟಿ ವಿರುದ್ದ ಇದೀಗ ಲಕ್ಷ ಲಕ್ಷ ಹಣ ಸುಲಿಗೆ ಮಾಡುತ್ತಿರುವ ಗಂಭೀರ ಆರೋಪ

Live Cricket

Add Your Heading Text Here