Download Our App

Follow us

Home » ಜಿಲ್ಲೆ » ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು RTO ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ..!

ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು RTO ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ..!

ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್​​ಗಳ ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿನ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.  ಆರ್​ಟಿಓ ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್​ಟಿಓ ಚೆಕ್​ಪೋಸ್ಟ್​​ಗಳ ಮೇಲೆ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್​​ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ. ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್​ಟಿಓ ಚೆಕ್ ಪೋಸ್ಟ್​​ನಲ್ಲಿನ ಸಿಬ್ಬಂದಿ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್​ಪಿ ಗೀತಾ ಬೀದರ್ ಮತ್ತು ಡಿವೈಎಸ್​ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್​ಟಿಓ ಚೆಕ್ ​ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹಾಗೇ, ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್​ಟಿಓ ಚೆಕ್‌ ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ಮಾಡಿದೆ. ಅಧಿಕಾರಿಗಳು ಚೆಕ್ ಪೋಸ್ಟ್​​ನಲ್ಲಿದ್ದ ಹಣವನ್ನು ವಶಪಡಿಸಿಕೊಂಡಿದ್ದು, ಶೋಧ ಕಾರ್ಯ ಮುಂದುವರೆದಿದೆ.

ಇದನ್ನೂ ಓದಿ : ಅರ್ಜುನ ಅವಧೂತ ಗುರೂಜಿಯನ್ನು ಭೇಟಿಯಾದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು..!

Leave a Comment

DG Ad

RELATED LATEST NEWS

Top Headlines

ಕೊಪ್ಪಳ : ಲೋಕಾಯುಕ್ತ ದಾಳಿ ವೇಳೆ ಲಂಚದ ಹಣ ನುಂಗಿದ ಸಹಕಾರಿ ಸಂಘಗಳ ಉಪನಿಬಂಧಕ..!

ಕೊಪ್ಪಳ : ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. NGO ಪ್ರಮಾಣ ಪತ್ರ ನೀಡಲು‌ ದಸ್ತಗಿರಿ ಅಲಿ ಎಂಬಾತ

Live Cricket

Add Your Heading Text Here