ಅಮಾಯಕ ರೈತರ ಮೇಲೆ ಹಲ್ಲೆ ನಡೆಸಿ ಜಮೀನು ಕಸಿಯಲು ಯತ್ನ – ಮುಡಾ ಮಾಜಿ ಅಧ್ಯಕ್ಷ ಹಾಗೂ ‘ಕೈ’ ಮುಖಂಡ ರಾಜೀವ್ ವಿರುದ್ಧ FIR!

ಮೈಸೂರು : ಕಾಂಗ್ರೆಸ್ ಮುಖಂಡ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಮಾಜಿ ಅಧ್ಯಕ್ಷ ರಾಜೀವ್ ವಿರುದ್ಧ ಅಮಾಯಕ ರೈತರ ಮೇಲೆ ಹಲ್ಲೆ ನಡೆಸಿ, ಅವರ ಜಮೀನನ್ನು ಬಲವಂತವಾಗಿ ಕಸಿದುಕೊಳ್ಳಲು ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ರಾಜೀವ್ ವಿರುದ್ಧ ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಸದ್ಯ ತಲೆಮರೆಸಿಕೊಂಡಿದ್ದಾನೆ. ತನಿಖೆ ಎದುರಿಸುವ ಭಯದಿಂದ ಪರಾರಿಯಾಗಿದ್ದು, ಪೊಲೀಸರು ರಾಜೀವ್ ಪತ್ತೆಗಾಗಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.

ರಾಜೀವ್ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಮುಖಂಡರೇ ಇಂತಹ ಭೂಗಳ್ಳರನ್ನು ಏಕೆ ಪಕ್ಷದಲ್ಲಿ ಉಳಿಸಿಕೊಂಡಿದ್ದೀರಿ? ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಮಾಯಕ ರೈತರ ಮೇಲಿನ ಹಲ್ಲೆ ಮತ್ತು ಜಮೀನು ಕಸಿಯುವ ಯತ್ನವನ್ನು ಖಂಡಿಸಿ ರೈತ ಸಂಘಟನೆಗಳು ನಾಳೆ ಬೃಹತ್ ಹೋರಾಟ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ : ವಾಹನ ಸವಾರರಿಗೆ ಮತ್ತೆ ಶಾಕ್‌ – ಸತತ 4ನೇ ಬಾರಿ CNG ದರ ಏರಿಕೆ.. ಕೆಜಿಗೆ 2 ರೂ. ಹೆಚ್ಚಳ!

Btv Kannada
Author: Btv Kannada

Leave a Comment

Read More

Read More