ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಭಾರತದ ಮಹಿಳಾ ಕ್ರಿಕೆಟ್ ನಾಯಕಿ ಹರ್ಮನ್​ಪ್ರೀತ್​ ಕೌರ್​​!

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ‘ಪದ್ಮಶ್ರೀ’ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಹೂಡಿಕೆ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರ್ಮನ್‌ಪ್ರೀತ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. 

ಭಾರತೀಯ ಕ್ರೀಡೆಗಳಿಗೆ, ವಿಶೇಷವಾಗಿ ಮಹಿಳಾ ಕ್ರಿಕೆಟ್‌ಗೆ ಹರ್ಮನ್‌ಪ್ರೀತ್ ಕೌರ್ ನೀಡಿದ ಅಸಾಧಾರಣ ಸೇವೆಗಳನ್ನು ಗುರುತಿಸಿ ಕೇಂದ್ರ ಸರ್ಕಾರ 2026ರ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಿತ್ತು. ನಿನ್ನೆ ಹರ್ಮನ್‌ಪ್ರೀತ್ ಕೌರ್ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ.

ಈ ವರ್ಷದ ಪದ್ಮ ಪ್ರಶಸ್ತಿಗಳನ್ನ ಸ್ವೀಕರಿಸಿದ 2ನೇ ಕ್ರಿಕೆಟರ್ ಕೌರ್. ಇದಕ್ಕೂ ಮುನ್ನ ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ರೋಹಿತ್ ಶರ್ಮಾ ಕೂಡ ಪದ್ಮಶ್ರೀ ಸ್ವೀಕರಿಸಿದ್ದರು.

ಇದನ್ನೂ ಓದಿ : ಅಮಾಯಕ ರೈತರ ಮೇಲೆ ಹಲ್ಲೆ ನಡೆಸಿ ಜಮೀನು ಕಸಿಯಲು ಯತ್ನ – ಮುಡಾ ಮಾಜಿ ಅಧ್ಯಕ್ಷ ಹಾಗೂ ‘ಕೈ’ ಮುಖಂಡ ರಾಜೀವ್ ವಿರುದ್ಧ FIR!

Btv Kannada
Author: Btv Kannada

Leave a Comment

Read More

Read More