ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ – ರಾತ್ರೋರಾತ್ರಿ ಮುಂಬೈಗೆ ಹಾರಿದ ಗವರ್ನರ್ ಗೆಹ್ಲೋಟ್!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ಸ್ಫೋಟಕ ಬೆಳವಣಿಗೆಗಳು ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಚರ್ಚೆ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಿಢೀರನೆ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಗವರ್ನರ್ ಅವರು ಭಾನುವಾರದವರೆಗೂ ಬೆಂಗಳೂರಿಗೆ ಹಿಂತಿರುಗುವ ಲಕ್ಷಣಗಳಿಲ್ಲ ಎಂದು ಹೇಳಲಾಗುತ್ತಿದ್ದು, ಸಿಎಂ ರಾಜೀನಾಮೆ ಪ್ರಕ್ರಿಯೆ ಮತ್ತು ಮುಂದಿನ ರಾಜಕೀಯ ತೀರ್ಮಾನಗಳ ಮೇಲೆ ಇದು ಯಾವ ರೀತಿಯ ಪರಿಣಾಮ ಬೀರಲಿದೆ ಎಂಬ ಚರ್ಚೆ ಆರಂಭವಾಗಿದೆ.

ಈ ಎಲ್ಲ ಬೆಳವಣಿಗೆಗಳ ಮಧ್ಯೆ ದೆಹಲಿಯ ಪ್ರಭಾವಿ ಬಿಜೆಪಿ ವರಿಷ್ಠ ನಾಯಕರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅತ್ಯಾಪ್ತ ಸಚಿವ ಹಾಗೂ ಹಿರಿಯ ಶಾಸಕರೊಬ್ಬರಿಗೆ ನೇರವಾಗಿ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಬೇಡ, ನಾವು ಅವರನ್ನು ಮುಖ್ಯಮಂತ್ರಿ ಆಗಿ ಮುಂದುವರಿಸುತ್ತೇವೆ ಎಂಬ ಸಂದೇಶವನ್ನು ದೆಹಲಿ ವರಿಷ್ಠರು ಸಿದ್ದರಾಮಯ್ಯ ಅವರ ಆಪ್ತ ಪಾಳಯಕ್ಕೆ ರವಾನಿಸಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ.

ಕರ್ನಾಟಕದ ರಾಜಕೀಯ ಬಿಕ್ಕಟ್ಟು ನೆರೆ ರಾಜ್ಯಗಳಿಗೂ ಹರಡಿದ್ದು, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಫುಲ್ ಅಲರ್ಟ್ ಆಗಿದ್ದಾರೆ. ಇದೀಗ ಬಿಜೆಪಿಯ ಇಬ್ಬರು ಮುಖಂಡರು ಕಾಂಗ್ರೆಸ್ ಪಕ್ಷದ ಸುಮಾರು 60ಕ್ಕೂ ಹೆಚ್ಚು ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಕರ್ನಾಟಕ ರಾಜಕಾರಣದಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಏನು ಬೇಕಾದರೂ ಆಗಬಹುದು. ಸದ್ಯ ಇಡೀ ದೇಶದ ಕಣ್ಣು ಈಗ ಕರ್ನಾಟಕದತ್ತ ನೆಟ್ಟಿದೆ.

ಇದನ್ನೂ ಓದಿ : ರಾತ್ರೋರಾತ್ರಿ ನೂರಾರು ಅಧಿಕಾರಿಗಳ ದಿಢೀರ್ ವರ್ಗಾವಣೆ – ಅಧಿಕಾರದ ಕಡೆಯ ದಿನ ವರ್ಗಾವಣೆ ಪತ್ರಕ್ಕೆ ಸಹಿ ಹಾಕಿದ ಸಿಎಂ ಸಿದ್ದರಾಮಯ್ಯ!

Btv Kannada
Author: Btv Kannada

Leave a Comment

Read More

Read More