Download Our App

Follow us

Home » ರಾಜ್ಯ » ರಾಜ್ಯದ ಮತದಾರರ ಅಂತಿಮ ಪಟ್ಟಿ ಪ್ರಕಟ : ಒಟ್ಟು 5.38 ಕೋಟಿ ಮತದಾರರು..!

ರಾಜ್ಯದ ಮತದಾರರ ಅಂತಿಮ ಪಟ್ಟಿ ಪ್ರಕಟ : ಒಟ್ಟು 5.38 ಕೋಟಿ ಮತದಾರರು..!

ಬೆಂಗಳೂರು : ರಾಜ್ಯದ ಮತದಾರರ ಅಂತಿಮ ಪಟ್ಟಿ ಪ್ರಕಟವಾಗಿದ್ದು ಒಟ್ಟು 5.38 ಕೋಟಿ ಮತದಾರರಿದ್ದಾರೆ. ಮಹಿಳಾ ಮತದಾರರ ಸಂಖ್ಯೆ ಭಾರಿ ಏರಿಕೆ ಕಂಡಿದೆ. ಕರ್ನಾಟಕ ಚುನಾವಣಾ ಆಯೋಗ ನಿನ್ನೆ ರಾಜ್ಯದ 224 ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟ ಮಾಡಿದೆ.

2,69,33,750 ಪುರುಷರು, 2,68,47,145 ಮಹಿಳೆಯರು ಮತದಾನದ ಗುರುತಿನಿ ಚೀಟಿ ಹೊಂದಿದ್ದಾರೆ. ಬದಲಾವಣೆ, ತಿದ್ದುಪಡಿ ಇದ್ದರೆ ಫಾರ್ಮ್ 8 ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಬದಲಾವಣೆ, ತಿದ್ದುಪಡಿ ಇದ್ದರೆ ಫಾರ್ಮ್ 8 ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ಕರಡು ಪಟ್ಟಿಗೆ ಹೋಲಿಸಿದರೆ ಮಹಿಳಾ ಮತದಾರರ ಸಂಖ್ಯೆ 2,77,717 ರಷ್ಟು ಗಮನಾರ್ಹ ಹೆಚ್ಚಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ. ಒಟ್ಟು ಜನಸಂಖ್ಯೆಯಲ್ಲಿ ಶೇ 69.74 ರಷ್ಟು ಮತದಾರರಾಗಿದ್ದಾರೆ.

ಪ್ರತಿ 1000 ವೋಟರ್ ಅನುಪಾತದಲ್ಲಿ 997 ಮಹಿಳಾ ಮತದಾರರು ಇದ್ದಾರೆ. ಬೆಂಗಳೂರಿನಲ್ಲಿ 98.43 ಲಕ್ಷ ಮತದಾರರು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ಕಡಿಮೆ ಎಂದರೆ 1,67,556 ಮತದಾರರನ್ನು ಹೊಂದಿದೆ. ಬೆಂಗಳೂರು ಉತ್ತರ ಸಂಸತ್​​ ಕ್ಷೇತ್ರದಲ್ಲಿ 31 ಲಕ್ಷಕ್ಕೂ ಅಧಿಕ ಮತದಾರರಿದ್ದು, ಉಡುಪಿ-ಚಿಕ್ಕಮಗಳೂರಿನಲ್ಲಿ ಕನಿಷ್ಠ 15 ಲಕ್ಷ ಮತದಾರರಿದ್ದಾರೆ.

ಇದನ್ನೂ ಓದಿ : ಬಿಜೆಪಿಗೆ ಜೈ ಶ್ರೀರಾಮ್ ಎಂದು ಟಾಂಗ್ ನೀಡಿದ್ರಾ ಸಿಎಂ ಸಿದ್ದರಾಮಯ್ಯ..?

Leave a Comment

DG Ad

RELATED LATEST NEWS

Top Headlines

ಕರ್ನಾಟಕ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿ ಉದ್ಘಾಟಿಸಿದ ರಾಗಿಣಿ ದ್ವಿವೇದಿ..!

ಸ್ಯಾಂಡಲ್‌ವುಡ್ ಬ್ಯೂಟಿ ರಾಗಿಣಿ ದ್ವಿವೇದಿ ಅವರು ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಜ್, ಗೌರವಾಧ್ಯಕ್ಷರಾದ ರವಿಶಂಕರ್,

Live Cricket

Add Your Heading Text Here