ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಡೆಯುತ್ತಿದ್ದ ಚರ್ಚೆಗೆ ತೆರೆ ಬಿದ್ದಿದೆ. ಇಂದು ನಡೆದ ಸಚಿವರ ಮಹತ್ವದ ಬ್ರೇಕ್​ಫಾಸ್ಟ್​ ಮೀಟಿಂಗ್​ನಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಇಂದು ನಡೆದ ಬ್ರೇಕ್​ ಫಾಸ್ಟ್​ ಮೀಟಿಂಗ್​ನಲ್ಲಿ ಸಿದ್ದರಾಮಯ್ಯ ತಮ್ಮ ಶಾಸಕರು ಮತ್ತು ಸಚಿವರ ಸಮ್ಮುಖದಲ್ಲೇ ಈ ಘೋಷಣೆ ಮಾಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.

ಬ್ರೇಕ್​ ಫಾಸ್ಟ್​ ಮೀಟಿಂಗ್‌ನಲ್ಲಿ ರಾಜೀನಾಮೆಯ ಬಗ್ಗೆ ಮುಕ್ತವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ. ಮುಂದಿನ ಸಿಎಂ ಆಯ್ಕೆಯನ್ನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದಿದ್ದಾರೆ.

ಅಲ್ಲದೇ ಸಭೆಯಲ್ಲೇ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಸಿದ್ದು ಕಾಲಿಗೆ ಬಿದ್ದು ಡಿಕೆಶಿ ಆಶೀರ್ವಾದ – ಕರ್ನಾಟಕದಲ್ಲಿ ಸಂಚಲನ ಮೂಡಿಸಿದ ಈ ಎರಡು ಫೋಟೋಗಳು!

Btv Kannada
Author: Btv Kannada

Leave a Comment

Read More

Read More