ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ – ಕಾಂಗ್ರೆಸ್ ಟ್ವೀಟ್!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದೆ.

“ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ರವಾನಿಸಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಅಪ್ಪಿಕೊಂಡ ಮತ್ತು ಡಿಕೆಶಿ ಸಿಎಂ ಸಿದ್ದರಾಮಯ್ಯರ ಕಾಲಿಗೆ ಬಿದ್ದು ಆಶೀರ್ವಾದ ತೆಗೆದುಕೊಳ್ಳುತ್ತಿರುವ ಫೋಟೋಗಳನ್ನು ಕರ್ನಾಟಕ ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

Btv Kannada
Author: Btv Kannada

Leave a Comment

Read More

Read More