ಸಿಎಂ ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ!

ಬೆಂಗಳೂರು : ಕರ್ನಾಟಕ ಕಾಂಗ್ರೆಸ್​​​ನಲ್ಲಿ ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 

ಸಿಎಂ ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯನವರ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ  ಅವರನ್ನ ವರ್ಗಾವಣೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಡಾ.ವೆಂಕಟೇಶಯ್ಯ ಅವರನ್ನು ವರ್ಗಾವಣೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ರಮೇಶ್ ಪಿ.ಕೋನರೆಡ್ಡಿ ಅವರನ್ನು ವಿದ್ಯುತ್ ಪ್ರಸರಣ ನಿಗಮದ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. 

ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ನಗರಾಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ-2 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹಾಗೇ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರನ್ನ ಕ್ರೈಸ್ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ : ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ – ಕಾಂಗ್ರೆಸ್ ಟ್ವೀಟ್!

Btv Kannada
Author: Btv Kannada

Leave a Comment

Read More

Read More