ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಸ್ಥಾನದ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದರು. ಇದೀಗ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ನಿನ್ನೆ ಬೆಳಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ತಮ್ಮ ನಿರ್ಧಾರ ಪ್ರಕಟಿಸಿದ್ದರು. ನಂತರ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು.

ದೆಹಲಿಯಿಂದ ವಾಪಾಸ್ ಆದ ರಾಜ್ಯಪಾಲ ಗೆಹ್ಲೋಟ್ ಅವರು ಸಿದ್ದರಾಮಯ್ಯ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ರಾಜೀನಾಮೆ ನೋವು ಕೊಡ್ತಿದೆ – ಬಿ.ಸಿ. ಪಾಟೀಲ್ ಭಾವುಕ ಪೋಸ್ಟ್!
Author: Btv Kannada
Post Views: 606







