Download Our App

Follow us

Home » ರಾಜಕೀಯ » ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..!

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..!

ಬೆಂಗಳೂರು : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಲಾಗಿದೆ.

ದಿನೇಶ್ ಗುಂಡೂರಾವ್ ಪತ್ನಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಖಾಸಗಿ ದೂರನ್ನು ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಕೆ‌.ಎನ್.ಶಿವಕುಮಾರ್ ಅವರು ಈ ಆದೇಶ ಮಾಡಿದ್ದಾರೆ. ಈ ಮೊದಲೇ ಶಾಸಕ ಯತ್ನಾಳ್ ಅವರಿಗೆ ಅಕ್ಟೋಬರ್‌ 16ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಶಾಸಕರು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಇನ್ನು ಈ ಪ್ರಕರಣದ ವಿಚಾರಣೆಯನ್ನು ಇದೇ ತಿಂಗಳ ಅಕ್ಟೋಬರ್ 28ಕ್ಕೆ ಮುಂದೂಡಿದೆ.

ಏನಿದು ಕೇಸ್? ಶಾಸಕ ಯತ್ನಾಳ್ ಅವರು ಸುದ್ದಿಗಾರರ ಜೊತೆಗೆ ಮಾತನಾಡುವಾಗ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ದಿನೇಶ್ ಗುಂಡೂರಾವ್ ಅವರ ಪತ್ನಿ ತಬುಸ್ಸುಮ್ ರಾವ್ ಅವರನ್ನು ಟೀಕಿಸಿದ್ದರು. ಸಚಿವರ ಮನೆಯಲ್ಲಿಯೇ ಅರ್ಧ ಪಾಕಿಸ್ತಾನ ಇದೆ ಎಂದು ಗುಡಗುದಿದ್ದರು. ಈ ಕುರಿತು ತಬುಸ್ಸುಮ್ ಅವರು ಯತ್ನಾಳ್‌ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜತೆಗೆ, ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಖಾಸಗಿ ದೂರು ದಾಖಲಿಸಿದ್ದರು.

ಈ ಹಿಂದೆ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪನ್ನು ರದ್ದು ಮಾಡುವಂತೆ ಕೋರಿ ಶಾಸಕ ಯತ್ನಾಳ್‌ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಹೇಳಿಕೆಯನ್ನು ಕೀಳು ಅಭಿರುಚಿ ಎಂದಿದ್ದರು. ಆ ಬಳಿಕ ಹೇಳಿಕೆ ನೀಡಿದ್ದಾರೋ ಇಲ್ವೋ ಎಂದು ಪ್ರಶ್ನೆ ಮಾಡಿದರು. ಯತ್ನಾಳ್‌ ಪರ ವಕೀಲರು ಹೌದು ಹೇಳಿಕೆ ನೀಡಿದ್ದಾರೆ ಎಂದು ಒಪ್ಪಿಕೊಂಡಿದ್ದರು. ಈ ರೀತಿಯ ಪದ ಬಯಕೆ ಸಮಾಜಕ್ಕೆ ಯಾವ ರೀತಿಯ ಸಂದೇಶ ನೀಡುತ್ತದೆ. ವಯಕ್ತಿಕ ತೇಜೋವಧೆಗೆ ಏಕೆ ಇಳಿಕಯುತ್ತೀರಾ ಎಂದು ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡಿದ್ದರು. ಇದೇ ವಿಚಾರ ಇದೀಗ ಶಾಸಕ ಯತ್ನಾಳ್ ಅವರಿಗೆ ಮುಳುವಾಗಿದೆ.

ಇದನ್ನೂ ಓದಿ : ಬಿಗ್‌ಬಾಸ್ ಮನೆಗೆ ನುಗ್ಗಿದ್ಯಾ ಮಳೆನೀರು? ಪ್ರವಾಹದಲ್ಲಿ ಸಿಲುಕಿಕೊಂಡ್ರಾ ಕಂಟೆಸ್ಟೆಂಟ್ಸ್?

Leave a Comment

DG Ad

RELATED LATEST NEWS

Top Headlines

ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಅಯ್ಯಪ್ಪ.. ಲಕ್ಷಾಂತರ ಭಕ್ತರಿಂದ ಶರಣು ಘೋಷ..!

ಕೇರಳ : ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಸಂಭವಿಸುವ ಮಕರ ಜ್ಯೋತಿಯನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ಭಕ್ತರು ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಮಕರ ಜ್ಯೋತಿ ದರ್ಶನ

Live Cricket

Add Your Heading Text Here