ನವದೆಹಲಿ : ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಅವರು ತಮ್ಮ ನಿವಾಸದಲ್ಲಿ ಎಸಿ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ.
ದೆಹಲ್ಲಿಯ ಹೌಜ್ಖಾಸ್ನಲ್ಲಿರುವ ಧನೇಂದ್ರ ಕುಮಾರ್ ಮನೆಯಲ್ಲಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಪುತ್ರ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ರಾತ್ರಿ 11:18 ರ ಸುಮಾರಿಗೆ ಅವಘಡ ಸಂಭವಿಸಿದ್ದು, ಈ ವೇಳೆ ಕುಟುಂಬ ಸದಸ್ಯರು ಮತ್ತು ಮನೆ ಕೆಲಸದವರು ಸೇರಿದಂತೆ ಒಟ್ಟು 5 ಜನರು ಮನೆಯಲ್ಲಿದ್ದರು. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಕೂಡಲೇ ಅವಘಡದಲ್ಲಿ ಗಾಯಗೊಂಡಿದ್ದ ಧನೇಂದ್ರ ಕುಮಾರ್ ಮತ್ತು ಅವರ ಮಗನನ್ನು ಹತ್ತಿರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಧನೇಂದ್ರ ಕುಮಾರ್ ಆಸ್ಪತ್ರೆಯಲೇ ಸಾವನ್ನಪ್ಪಿದ್ದಾರೆ.
ಧನೇಂದ್ರ ಕುಮಾರ್ 1986ರ ಹರಿಯಾಣ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದು, ವಿಶ್ವ ಬ್ಯಾಂಕ್ನಲ್ಲಿ ಕಾರ್ಯಕಾರಿ ನಿರ್ದೇಶಕರಾಗಿ ಭಾರತವನ್ನು ಪ್ರತಿನಿಧಿಸಿದ್ದರು.
ಹರಿಯಾಣ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಮತ್ತು ಹರಿಯಾಣ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮುಂತಾದ ಪ್ರಮುಖ ಆಡಳಿತಾತ್ಮಕ ಹುದ್ದೆಗಳನ್ನು ಧನೇಂದ್ರ ಕುಮಾರ್ ನಿರ್ವಹಣೆ ಮಾಡಿದ್ದರು.
ಇದನ್ನೂ ಓದಿ : ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್!







