ಬೆಂಗಳೂರು : ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಇಂದು ರಾತ್ರಿ 8 ಗಂಟೆಯೊಳಗೆ ಅಂತ್ಯ ಸಂಸ್ಕಾರ ನಡೆಯಲಿದೆ.
ಇದನ್ನೂ ಓದಿ : ಜಗದೀಶ್ ಎಲಿಮಿನೇಷನ್ಗೆ ಅಸಲಿ ಕಾರಣ ಬಿಚ್ಚಿಟ್ಟ ಕಿಚ್ಚ ಸುದೀಪ್..!
Post Views: 387