Download Our App

Follow us

Home » ಮೆಟ್ರೋ » ಮಳೆ ಅವಾಂತರ – ಬೆಂಗಳೂರಿನ ರಸ್ತೆಗಳೆಲ್ಲ ಜಲಾವೃತ.. ಎಲ್ಲೆಲ್ಲಿ ಏನೇನಾಯ್ತು?

ಮಳೆ ಅವಾಂತರ – ಬೆಂಗಳೂರಿನ ರಸ್ತೆಗಳೆಲ್ಲ ಜಲಾವೃತ.. ಎಲ್ಲೆಲ್ಲಿ ಏನೇನಾಯ್ತು?

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಡುಗು, ಸಿಡಿಲು ಸಹಿತ ರಣ ಭಯಂಕರ ಮಳೆಯಾಗಿದೆ. ವರುಣ ಅಬ್ಬರಿಸಿ ಬೊಬ್ಬಿರಿದ ಹೊಡೆತಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರವಾಗಿ ರಾಜ್ಯ ರಾಜಧಾನಿಯಲ್ಲಿ ಸುರಿಯುತ್ತಿರುವ ಮಳೆ ಸಾಕಷ್ಟು ಅವಾಂತರಕ್ಕೂ ಕಾರಣವಾಗಿದೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುತ್ತಿದ್ದು, ಹಲವೆಡೆ ಭಾರೀ ಟ್ರಾಫಿಕ್​ ಜಾಮ್​ ಉಂಟಾಗಿದೆ. ಬೆಂಗಳೂರಲ್ಲಿ ಇನ್ನೂ 3-4 ದಿನ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಪ್ರಮುಖವಾಗಿ ಮೆಜೆಸ್ಟಿಕ್​, ಮೈಸೂರು ಬ್ಯಾಂಕ್​ ಸರ್ಕಲ್​, ವಿಧಾನಸೌಧ, ಶಾಂತಿನಗರ, ಜಯನಗರ, ತ್ಯಾಗರಾಜನಗರ, ಶ್ರೀನಗರ, ಕೆ.ಆರ್​.ಮಾರ್ಕೆಟ್​, ಟೌನ್​ಹಾಲ್​, ಕಾರ್ಪೊರೇಷನ್​​ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆ.ಆರ್​.ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ, ಬೆಳ್ಳಂದೂರು, ಮಾರತ್ತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್​ ಬೋರ್ಡ್​, ಬಿಟಿಎಂ ಲೇಔಟ್, ಜೆ.ಪಿ.ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್​ಆರ್​​ ನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

ಬ್ಯಾಟರಾಯನಪುರದ ನಾಗದೇವನಹಳ್ಳಿ ಬಡಾವಣೆಯಲ್ಲಿ ಮಳೆ ನೀರಿನಿಂದಾಗಿ ಕೆರೆಯಂತಾಗಿದ್ದು, ಮನೆಗಳಿಗೆ ಹೋಗೋದಕ್ಕೂ ನಿವಾಸಿಗಳು ಹರಸಾಹಸ ಪಡುವಂತಾಗಿದೆ. ಮಳೆ ನೀರು ಹೊರ ಹೋಗುವುದಕ್ಕೆ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ಬಾರಿ ಮಳೆಯಾದಾಗ್ಲೂ ನಿವಾಸಿಗಳಿಗೆ ಸಂಕಷ್ಟ ತಪ್ಪುತ್ತಿಲ್ಲ.

ಇಂದು ಸೋಮವಾರವಾದ್ದರಿಂದ ಊರುಗಳಿಗೆ ಹೋಗಿದ್ದ ಮಂದಿ ನಗರಕ್ಕೆ ಆಗಮಿಸುತ್ತಿದ್ದು, ಇದೇ ಕಾರಣಕ್ಕೆ ಮುಂಜಾನೆ ಮೆಜೆಸ್ಟಿಕ್ ನಿಲ್ದಾಣದ ಸುತ್ತಮುತ್ತ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೆಜೆಸ್ಟಿಕ್ ಬಳಿಯ ಓಕಳಿಪುರಂ ಅಂಡರ್​ಪಾಸ್ ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಅಂಡರ್​​ಪಾಸ್​ನ ನೀರಿನಲ್ಲಿ ಆಟೋ, ಕಾರು ಸಿಲುಕಿದ ಪರಿಣಾಮ ಓಕಳಿಪುರಂ ಅಂಡರ್​ಪಾಸ್ ಬಳಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಲ್ಲೂ ಸಾಲು ಸಾಲು ತಾಪತ್ರಯ ತಲೆದೋರಿದೆ. ಪ್ರಮುಖ ರಸ್ತೆಗಳು ನದಿಯಂತಾಗಿದ್ದು, ವಾಹನಗಳು ತೇಲಿಕೊಂಡು ಹೋಗುವಷ್ಟು ರಭಸವಾಗಿ ನೀರು ಹರಿದಿದೆ. ಕೆಂಗೇರಿ ರೈಲ್ವೆ ನಿಲ್ದಾಣ ವರುಣಾರ್ಭಟಕ್ಕೆ ಹೊಳೆಯಂತೆ ಬದಲಾಗಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಭಾರೀ ಮಳೆ.. ಇಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ..!

 

Leave a Comment

DG Ad

RELATED LATEST NEWS

Top Headlines

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ – ಮೂವರು ದುರ್ಮರಣ, ಮುಂದುವರಿದ ರಕ್ಷಣಾ ಕಾರ್ಯಾಚರಣೆ..!

ಬೆಂಗಳೂರು : ಸಿಲಿಕಾನ್​​ ಸಿಟಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದೀಗ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ

Live Cricket

Add Your Heading Text Here