ನೂತನ ಸಿಎಂ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್ – ಜೂ.3ಕ್ಕೆ ಡಿ.ಕೆ ಶಿವಕುಮಾರ್​ ಪಟ್ಟಾಭಿಷೇಕ!

ಬೆಂಗಳೂರು : ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಜೂ.3ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಜೊತೆ 12 -14 ಮಂದಿ ಪ್ರಮಾಣವಚನ ಸಾಧ್ಯತೆಯಿದೆ.

ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್‌ ಇಂದು ರಾಜ್ಯಪಾಲರನ್ನ ಭೇಟಿಯಾಗಲಿದ್ದಾರೆ. ಡಿಕೆಶಿ ಆಗಮನದ ಹಿನ್ನೆಲೆ ಲೋಕಭವನದ ಮುಂದೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. 

ಇದನ್ನೂ ಓದಿ : ಬೆಂಗಳೂರಲ್ಲಿ RCB ಅಭಿಮಾನಿಗಳ ಸಂಭ್ರಮಾಚರಣೆಗೆ ಬ್ರೇಕ್​ – ಪೊಲೀಸರಿಂದ ಗೈಡ್‌ಲೈನ್ಸ್‌ ಬಿಡುಗಡೆ!

Btv Kannada
Author: Btv Kannada

Leave a Comment

Read More