ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್!

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆಯ ನಂತರ ರಾಜ್ಯದ ನೂತನ ಸಿಎಂ ಆಯ್ಕೆ ಸಂಬಂಧ ರಾಜಕೀಯ ಚಟುವಟಿಕೆಗಳು ಹೆಚ್ಚಾಗಿದೆ. ಈ ಮಧ್ಯೆ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಅಧಿಕೃತ ನಿವಾಸ ಲೋಕ ಭವನದಲ್ಲಿ ಭೇಟಿಯಾದರು.

ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕರ ಸಭೆ ನಡೆಯಲಿದ್ದು, ಈ ವೇಳೆ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಹೆಸರನ್ನು ಘೋಷಿಸಲಿದ್ದಾರೆ. ಈಗಾಗಲೇ ಡಿ ಕೆ ಶಿವಕುಮಾರ್ ಸಿಎಂ ಆಗಲಿರುವ ವಿಷಯ ಬಹಿರಂಗವಾಗಿದ್ದು, ಇಂದಿನ ಸಭೆಯಲ್ಲಿ ಇದು ಅಧಿಕೃತವೆನಿಸಿಕೊಳ್ಳಲಿದೆ.

ರಾಜ್ಯದ ನೂತನ ಮತ್ತು 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ ಚಿತ್ರಕೂಟ ಶಾಲೆಯಲ್ಲಿ ಅಗ್ನಿ ಅವಘಡ – ತಪ್ಪಿದ ಭಾರೀ ಅನಾಹುತ!

Btv Kannada
Author: Btv Kannada

Leave a Comment

Read More