Download Our App

Follow us

Home » ಮೆಟ್ರೋ » ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ – ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ..!

ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ – ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ..!

ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮತ್ತೊಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಇದುವರೆಗೂ ಕಟ್ಟಡದ ಅವಶೇಷಗಳಡಿಯಿಂದ 13 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಒಟ್ಟು 6 ಶವ ಪತ್ತೆಯಾಗಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು NDRF ಮತ್ತು SDRF ತಂಡಗಳು ಸತತ 17 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿವೆ. 4 ಮಹಡಿಗೆ ಅನುಮತಿ ಪಡೆದು 6 ಮಹಡಿ ನಿರ್ಮಿಸಲಾಗಿತ್ತು, ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡುತ್ತಿದ್ದ ಹಿನ್ನೆಲೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಹೆಣ್ಣೂರು ಠಾಣೆಯಲ್ಲಿ FIR ದಾಖಲಾಗಿದೆ.

ಅರ್ಮಾನ್, ತ್ರಿಪಾಲಿ, ಮೊಹಮ್ಮದ್ ದಾಹಿಲ್, ಶಂಕರ್, ಸತ್ಯರಾಜ್ ಎಂಬುವವರ ಗುರುತು ಪತ್ತೆಯಾಗಿದೆ. ಅವಶೇಷದಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ತಂಡ
ಇಂಚಿಂಚೂ ಬಿಡದೇ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್​​ಗೆ ಸೇರ್ಪಡೆಯಾದ ಸಿ.ಪಿ ಯೋಗೇಶ್ವರ್ – ‘ಕೈ’​ಗೆ ಸೈನಿಕನ ಕಂಡೀಷನ್​ ಏನೇನು..?

Leave a Comment

DG Ad

RELATED LATEST NEWS

Top Headlines

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು : ಸಚಿವ ಎನ್.ಚಲುವರಾಯಸ್ವಾಮಿ..!

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು

Live Cricket

Add Your Heading Text Here