Download Our App

Follow us

Home » ರಾಜಕೀಯ » ಕಾಂಗ್ರೆಸ್​ ಸೇರಿದ ಯೋಗೇಶ್ವರ್​​ ಅಭ್ಯರ್ಥಿ ಆಗೋದು ಫಿಕ್ಸ್​.. ಡಿಕೆಶಿ ಚೆಕ್​ಮೇಟ್​ಗೆ ಹೆಚ್​ಡಿಕೆ ರಣತಂತ್ರ ಏನು..?

ಕಾಂಗ್ರೆಸ್​ ಸೇರಿದ ಯೋಗೇಶ್ವರ್​​ ಅಭ್ಯರ್ಥಿ ಆಗೋದು ಫಿಕ್ಸ್​.. ಡಿಕೆಶಿ ಚೆಕ್​ಮೇಟ್​ಗೆ ಹೆಚ್​ಡಿಕೆ ರಣತಂತ್ರ ಏನು..?

ಬೆಂಗಳೂರು : ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​ ಸಮ್ಮುಖದಲ್ಲಿ ಸಿ.ಪಿ.ಯೋಗೇಶ್ವರ್​ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದರು. ಈ ಮೂಲಕ ಯೋಗೇಶ್ವರ್​, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಕಣಕ್ಕಿಳಿಯುವುದು ಖಚಿತ ಎಂದು ಹೇಳಲಾಗುತ್ತಿದೆ. ಆದರೆ ನವೆಂಬರ್ 13ರಂದು ನಡೆಯುವ ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು? ಎಂಬುದು ಸದ್ಯದ ಯಕ್ಷ ಪ್ರಶ್ನೆಯಾಗಿದೆ.

ಚನ್ನಪಟ್ಟಣದಲ್ಲಿ ಸೈನಿಕ ಎಂದೆಲ್ಲ ಕರೆಸಿಕೊಳ್ಳುವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಚನ್ನಪಟ್ಟಣ ಗೆಲ್ಲಲೇಬೇಕು ಎಂದು ಪಣತೊಟ್ಟಿದ್ದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಗೆಲುವಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.

ಇದೀಗ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಿ. ಪಿ. ಯೋಗೇಶ್ವರ್​ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಜೆಡಿಎಸ್​ನಿಂದ ನಾಲ್ಕು ಹೆಸರುಗಳು ಕೇಳಿ ಬರ್ತಿವೆ. ಜೆಡಿಎಸ್​ನಿಂದ ನಿಖಿಲ್​​ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಅನುಸೂಯ ಮಂಜುನಾಥ್​​​ ಮತ್ತು ಜಯಮುತ್ತು ಹೆಸರು ಚರ್ಚೆಯಲ್ಲಿವೆ.

ಯೋಗೇಶ್ವರ್​ಗೆ ಪ್ರಬಲ ಎದುರಾಳಿ ಹುಡುಕ್ತಿರೋ ದಳಪತಿ, ನಿಖಿಲ್​ ಅಭ್ಯರ್ಥಿ ಮಾಡೋದು ಬಹುತೇಕ ಫಿಕ್ಸ್ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಜೆಪಿ ನಾಯಕರ ಜೊತೆಯೂ ಚರ್ಚೆ ಮಾಡಿರೋ ದಳಪತಿ,  ಇಂದು ಸಂಜೆ ಚನ್ನಪಟ್ಟಣ ಮುಖಂಡರ ಜೊತೆ ಮತ್ತೊಂದು ಸಭೆ ಮಾಡಲಿದ್ದಾರೆ.

ಇದನ್ನೂ ಓದಿ : JDS ಸೇರಿದ ನಂತರ ಬಿಜೆಪಿ ವಾತಾವರಣ ಕೆಟ್ಟಿದೆ – ಕಾಂಗ್ರೆಸ್ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ..!

Leave a Comment

DG Ad

RELATED LATEST NEWS

Top Headlines

ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಪ್ರಕರಣ – AE ವಿನಯ್​​ ಅಮಾನತು ಮಾಡಿ BBMP ಕಮಿಷನರ್​​ ಆದೇಶ..!

ಬೆಂಗಳೂರು : ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಕೇಸ್​​ನಲ್ಲಿ ಮೊದಲ ತಲೆದಂಡವಾಗಿದೆ. ಹೊರಮಾವು ವಿಭಾಗ ಸಹಾಯಕ ಕಾರ್ಯ ನಿರ್ವಹಕ ಕೆ.ವಿನಯ್ ಅಮಾನತು ಮಾಡಿ BBMP ಕಮಿಷನರ್​​ ಆದೇಶ ಹೊರಡಿಸಿದ್ದಾರೆ.

Live Cricket

Add Your Heading Text Here