Download Our App

Follow us

Home » ಜಿಲ್ಲೆ » ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು : ಸಚಿವ ಎನ್.ಚಲುವರಾಯಸ್ವಾಮಿ..!

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು : ಸಚಿವ ಎನ್.ಚಲುವರಾಯಸ್ವಾಮಿ..!

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು ಒಂದಾಗಿ ಶ್ರಮಿಸಬೇಕಿದೆ ಎಂದು ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ವಿಕಾಸ ಸೌಧದ ತಮ್ಮ ಕೊಠಡಿಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಸೊಗಡಿನ ಜೊತೆಗೆ ರಾಜ್ಯದ ಬದುಕನ್ನು ಬೆಸೆಯುವ ಸ್ವರೂಪದಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ಇದರಲ್ಲಿ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು ಸಂಘ ಸಂಸ್ಥೆಗಳು, ಸಾಹಿತಿಗಳು, ಚಿಂತಕರು, ಅಧಿಕಾರಿ ಸಿಬ್ಬಂದಿ ಹೆಚ್ಚಿನ ಕಾಳಜಿ, ಪರಿಶ್ರಮ ವಹಿಸಬೇಕು ಎಂದರು.

ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರ್ಥಿಕ ಇಲಾಖೆಯಿಂದ 25 ಕೋಟಿ ರೂ ಬಿಡುಗಡೆಗೆ ಶಿಫಾರಸು ಮಾಡಿದೆ. ಅದಷ್ಟು ಅದರ ಇತಿ ಮಿತಿಯೊಳಗೆ ವೆಚ್ಚ ನಿಯಂತ್ರಣ ಮಾಡಿಕೊಳ್ಳುವುದು ಸೂಕ್ತ ಎಂದು ಚಲುವರಾಯಸ್ವಾಮಿ ಅವರು ಸಲಹೆ ನೀಡಿದರು.

ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಅಧ್ಯಕ್ಷರಾದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳ ಅಭಿಪ್ರಾಯ, ಸಮಿತಿಗಳ ತೀರ್ಮಾನಗಳನ್ನು ಆಲಿಸಿದ ಸಚಿವರು ಸಾಹಿತ್ಯ-ಸಂಭ್ರಮಕ್ಕೆ ಯಾವುದೇ ಕೊರತೆಯಾಗದಂತೆ ಸಂಘಟನೆ ಮಾಡಲು ಕರೆ ನೀಡಿದರು.

ಮಂಡ್ಯ ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಬೇಕು. ವ್ಯಾಪಕ ಪ್ರಚಾರ, ಉತ್ತಮ ಅಲಂಕಾರ ಮಾಡಬೇಕು. ಆಕರ್ಷಕ ಮೆರವಣಿಗೆ, ಅರ್ಥಪೂರ್ಣ ವಿಚಾರಗೋಷ್ಠಿ, ಕಾರ್ಯಕ್ರಮಗಳು, ಮುದ್ದೆ ಬಸ್ಸಾರು ಸೇರಿದಂತೆ ಸ್ಥಳೀಯ ಆಹಾರ ಹಾಗೂ ಉತ್ತರ ಕರ್ನಾಟಕದ ತಿನಿಸಿಸುಗಳ ಸಮಿಶ್ರಣಗೊಂಡ ಊಟೋಪಚಾರ ವ್ಯವಸ್ಥೆ ಮಾಡುವಂತೆ ಸಚಿವ ಚಲುವರಾಯಸ್ವಾಮಿ ಸಲಹೆ ನೀಡಿದರು.

ಸಾಹಿತ್ಯ ಸಮ್ಮೇಳನದ ಮೊದಲೆರಡು ದಿನ ಸಂಜೆಯ ನಂತರ ಅತ್ಯುತ್ತಮ ಸಾಂಸ್ಕೃತಿಕ ಕಾರ್ಯಮಗಳನ್ನು ಆಯೋಜಿಸಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಸಮ್ಮೆಳನಕ್ಕೆ ವಿಶೇಷ ಬಸ್ ಸಂಪರ್ಕ ವ್ಯವಸ್ಥೆ ಮಾಡಬೇಕು ಎಂದು ಸಚಿವ ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.

ಇನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷರಾದ ರಮೇಶ ಬಂಡಿಸಿದ್ದೇಗೌಡ, ಶಾಸಕರಾದ ನರೇಂದ್ರಸ್ವಾಮಿ, ರವಿಕುಮಾರ್ (ಗಣಿಗ), ಉದಯ್ ಗೌಡ, ದರ್ಶನ್ ಪುಟ್ಟಣ್ಣಯ್ಯ, ವಿಧಾನಸಭಾ ಪರಿಷತ್ ಸದಸ್ಯರಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾದ ನಾಡೋಜ ಮಹೇಶ್ ಜೋಷಿ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದು, ಸಮ್ಮೇಳನದ ಯಶಸ್ವಿ ಸಂಘಟನೆ ಕುರಿತು ಅಮೂಲ್ಯ ಸಲಹೆಗಳನ್ನು ನೀಡಿದರು.

ಇದನ್ನೂ ಓದಿ : ಅಪ್ಪು ಬರ್ತ್‌ಡೇಗೆ ಹಸೆಮಣೆ ಏರ್ತಾರಾ ಅನುಶ್ರೀ? ಹರಿದು ಬರ್ತಿದೆ ಶುಭಾಶಯಗಳ ಸುರಿಮಳೆ..!

Leave a Comment

DG Ad

RELATED LATEST NEWS

Top Headlines

ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್‌ಗೆ ಮದುವೆ ಪ್ರಪೋಸಲ್ ಇಟ್ಟ ನಟಿ..!

ಬಿಗ್ ಬಾಸ್, ಅತ್ಯಂತ ಜನಪ್ರಿಯ ಕಾರ್ಯಕ್ರಮ. ಹಿಂದಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಅನ್ನು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಇದೀಗ ಬಿಗ್ ಬಾಸ್ ವೇದಿಕೆಯಲ್ಲಿ

Live Cricket

Add Your Heading Text Here