ಬೆಂಗಳೂರು : IPL ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಆರ್ಸಿಬಿ VS ಜಿಟಿ ಮುಖಾಮುಖಿಯಾಗಲಿದೆ.
ಬೆಂಗಳೂರು ಮತ್ತು ಗುಜರಾತ್ ತಂಡಗಳ ನಡುವೆ ಐಪಿಎಲ್ ಫೈನಲ್ ಪಂದ್ಯದ ಹಿನ್ನೆಲೆ ಫಲಿತಾಂಶದ ಬಳಿಕ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಖಡಕ್ ಮಾರ್ಗಸೂಚಿ ಪ್ರಕಟಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಹುಚ್ಚಾಟ ನಡೆಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.
- ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ
- ಅನುಮತಿ ಇಲ್ಲದೆ ರಸ್ತೆಗಳಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಸುವಂತಿಲ್ಲ
- ಪಟಾಕಿ ಸಿಡಿಸಬಾರದು, ಅಪಾಯಕಾರಿ ವಸ್ತುಗಳನ್ನು ಬಳಸಬಾರದು
- ಜನಸಂದಣಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಶಾಂತಿ, ಶಿಸ್ತು ಪಾಲಿಸಬೇಕು
- ಸಂಚಾರ ವಿಭಾಗದ ಪೊಲೀಸರು ನೀಡುವ ಸಲಹೆ ಸೂಚನೆ ಪಾಲಿಸಬೇಕು
- ಬೈಕ್ ರ್ಯಾಲಿ, ಅತಿವೇಗದ ಚಾಲನೆ, ಸ್ಟಂಟ್, ಹಾರ್ನ್ ಮಾಡುವಂತಿಲ್ಲ
- ರಸ್ತೆ ತಡೆದು ಸಂಭ್ರಮಾಚರಣೆ ಮಾಡುವಂತಿಲ್ಲವೆಂದು ಪೊಲೀಸರ ಸೂಚನೆ
- ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಬಾರದು
- ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಟಿಸುವ ಪೋಸ್ಟ್ ಹಾಕುವಂತಿಲ್ಲ
- ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳಬಾರದು
- ಫಲಿತಾಂಶದ ಹೆಸರಿನಲ್ಲಿ ಬೇರೆ ತಂಡದ ಅಭಿಮಾನಿಗಳನ್ನು ನಿಂದಿಸಬಾರದು
ಇದನ್ನೂ ಓದಿ : ಡಿಕೆ ಶಿವಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಮತ್ತೆ 2028ರಲ್ಲಿ ಅಧಿಕಾರಕ್ಕೆ – ಕೆ.ಸಿ. ವೇಣುಗೋಪಾಲ್!
Author: Btv Kannada
Post Views: 270









