Download Our App

Follow us

Home » ರಾಜಕೀಯ » ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬಿಗ್ ಶಾಕ್ – ಬಂಡಾಯವೆದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ..!

ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬಿಗ್ ಶಾಕ್ – ಬಂಡಾಯವೆದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ..!

ಹಾವೇರಿ : ಶಿಗ್ಗಾಂವಿ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಘೋಷಣೆಯಾಗಿದೆ. ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಇದೀಗ ಶಿಗ್ಗಾಂವಿಯಲ್ಲಿ ಕಾಂಗ್ರೆಸ್​ಗೆ ಬಿಗ್ ಶಾಕ್ ಎದುರಾಗಿದ್ದು, ಯಾಸಿರ್ ಪಠಾಣ್​​​​ಗೆ ಟಿಕೆಟ್ ಘೋಷಿಸುತ್ತಿದ್ದಂತೆ ಬಂಡಾಯ ಎದ್ದಿದ್ದಾರೆ.
ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯವೆದ್ದಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಖಾದ್ರಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಶಿಗ್ಗಾಂವಿಯಲ್ಲಿ ಪಾದಯಾತ್ರೆ ಮೂಲಕ ತೆರಳಿ ನಾಮಪತ್ರ ಸಲ್ಲಿಕೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ಹಾಗಾಗಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್​ಗೆ ಬಂಡಾಯದ ಟೆನ್ಷನ್​​​ ಶುರುವಾಗಿದ್ದು, ಖಾದ್ರಿ ಮನವೊಲಿಕೆ ಮಾಡಲು ಕಾಂಗ್ರೆಸ್ ನಾಯಕರ ಪ್ರಯತ್ನಿಸುತ್ತಿದ್ದಾರೆ.

ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್, ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಇದೀಗ ಉಪಚುನಾವಣೆಗೂ ಸಹ ಕಾಂಗ್ರೆಸ್​, ಹೈಕಮಾಂಡ್ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರನ್ನೇ ಕಣಕ್ಕಿಳಿಸಿದೆ.

ಈ ಹಿಂದೆ ಧಾರವಾಡ ಶಾಸಕ ವಿನಯ್​ ಕುಲಕರ್ಣಿ ಪುತ್ರಿಗೆ ಟಿಕೆಟ್​ ನೀಡಲಾಗುತ್ತೆ ಎನ್ನುವ  ಮಾತುಗಳು ಕೇಳಿಬಂದಿದ್ದವು. ಆದ್ರೆ, ಹೈಕಮಾಂಡ್​, ಅಂತಿಮವಾಗಿ ಯಾಸೀರ್​ ಅಹ್ಮದ್​ ಖಾನ್​ ಪಠಾಣ್  ಅವರಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟಿದೆ.

ಇದನ್ನೂ ಓದಿ : ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಟ್ರಾಫಿಕ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಯುವತಿ‌..!

ಬೆಂಗಳೂರು : ಯುವತಿಯೋರ್ವಳು ಟ್ರಾಫಿಕ್ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯ ESI ಆಸ್ಪತ್ರೆಯ ಜಂಕ್ಷನ್​​​​ನಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಬಾಡಿ ಕ್ಯಾಮೆರಾ

Live Cricket

Add Your Heading Text Here