ಬೆಂಗಳೂರು : ಚಲಿಸುತ್ತಿದ್ದ ಕಾರೊಂದು ಧಗಧಗನೆ ಹೊತ್ತಿ ಉರಿದಿರುವ ಘಟನೆ ನೆಲಮಂಗಲ-ಕುಣಿಗಲ್ ಹೆದ್ದಾರಿಯ ಲಕ್ಕೇನಹಳ್ಳಿ ಬಳಿ ನಡೆದಿದೆ. ಈ ಅವಘಡದಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಬೆಂಕಿ ಕಾಣಿಸಿಕೊಳ್ಳುತಿದ್ದಂತೆ ಕಾರಿನಿಂದ ಕೆಳಕ್ಕಿಳಿದು ಚಾಲಕ ಪ್ರಾಣ ಉಳಿಸಿಕೊಂಡಿದ್ದಾನೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಿಟ್ ಕಾಯಿನ್ ಕೇಸ್ – ಮೊಹಮ್ಮದ್ ನಲಪಾಡ್ಗೆ ಮತ್ತೆ ED ನೋಟಿಸ್!
Author: Btv Kannada
Post Views: 286









