Download Our App

Follow us

Home » ಸಿನಿಮಾ » ಟೀಸರ್​​ನಲ್ಲೇ ಕುತೂಹಲ ಮೂಡಿಸಿದ ‘ಭೈರತಿ ರಣಗಲ್’ – ನ.15ಕ್ಕೆ ಸಿನಿಮಾ ತೆರೆಗೆ..!

ಟೀಸರ್​​ನಲ್ಲೇ ಕುತೂಹಲ ಮೂಡಿಸಿದ ‘ಭೈರತಿ ರಣಗಲ್’ – ನ.15ಕ್ಕೆ ಸಿನಿಮಾ ತೆರೆಗೆ..!

ನಿರ್ದೇಶಕ ನರ್ತನ್​ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರ ಕಾಂಬಿನೇಷನ್​ನಲ್ಲಿ ಮೂಡಿಬಂದ ಬಹುನಿರೀಕ್ಷಿತ “ಭೈರತಿ ರಣಗಲ್” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಗೀತಾ ಶಿವರಾಜ್​ಕುಮಾರ್​ ಅವರು ‘ಗೀತಾ ಪಿಕ್ಚರ್ಸ್​’ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಟೀಸರ್ ಕುತೂಹಲ ಮೂಡಿಸಿದ್ದು, ಶಿವಣ್ಣ ಅವರ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಈಗಾಗಲೇ ಟೈಟಲ್ ಸಾಂಗ್ ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ “ಭೈರತಿ ರಣಗಲ್” ಚಿತ್ರ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಟ್ರೇಲರ್ ಬರಲಿದೆ. ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಶಿವರಾಜ್​ಕುಮಾರ್ ಅವರಿಗೆ ರುಕ್ಮಿಣಿ ವಸಂತ್ ಜೋಡಿಯಾಗಿ ನಟಿಸಿದ್ದಾರೆ. ರವಿ ಬಸ್ರೂರ್ ಸಂಗೀತ ನಿರ್ದೇಶನ, ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ‌ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.

ಇದನ್ನೂ ಓದಿ : ಬೆಂಗಳೂರು : ಟ್ರಾಫಿಕ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಯುವತಿ‌..!

Leave a Comment

DG Ad

RELATED LATEST NEWS

Top Headlines

ಶತಕೋಟಿ ಒಡೆಯ ನಿಖಿಲ್ ಕುಮಾರಸ್ವಾಮಿ.. ಪುತ್ರನ ಹೆಸರಲ್ಲಿದೆ 11 ಲಕ್ಷ..!

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಇಂದು ರೋಡ್ ಶೋ ಮೂಲಕ ತೆರಳಿ ನಾಮಿನೇಷನ್ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರವನ್ನು  ಘೋಷಿಸಿಕೊಂಡಿದ್ದಾರೆ.

Live Cricket

Add Your Heading Text Here