Download Our App

Follow us

Home » ಸಿನಿಮಾ » ಕನ್ನಡ ಚಿತ್ರ ನಿರ್ಮಾಪಕರಿಗೆ ವರದಾನ – ಸಿನಿ ಪ್ರಿಯರಿಗಾಗಿ ಬರ್ತಿದೆ ಹೊಸ ಒಟಿಟಿ ಪ್ಲಾಟ್‌ಫಾರ್ಮ್‌..!

ಕನ್ನಡ ಚಿತ್ರ ನಿರ್ಮಾಪಕರಿಗೆ ವರದಾನ – ಸಿನಿ ಪ್ರಿಯರಿಗಾಗಿ ಬರ್ತಿದೆ ಹೊಸ ಒಟಿಟಿ ಪ್ಲಾಟ್‌ಫಾರ್ಮ್‌..!

ಇತ್ತೀಚಿನ ದಿನಗಳಲ್ಲಿ ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡುವವರ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಚಿತ್ರಪ್ರೇಮಿಗಳ ಬೇಡಿಕೆಗನುಗುಣವಾಗಿ, ಅವರನ್ನು ರಂಜಿಸಲು ಓಟಿಟಿ ಪ್ಲಾಟ್ ಫಾರಂಗಳು ಸನ್ನದ್ದವಾಗುತ್ತಿವೆ. ಇದೀಗ ಗ್ರಾಹಕರ ಬಜೆಟ್​​ ಫ್ರೆಂಡ್ಲಿ ಓಟಿಟಿ ಯಾಗಿ “ಓಟಿಟಿ ಪ್ಲೇಯರ್” ಪ್ರಾರಂಭವಾಗಿದೆ.

ಇದು ಆ್ಯಪ್ ಅಲ್ಲ, ಹಾರ್ಲೀ ಎಂಟರ್ ಟೈನ್ ಮೆಂಟ್ ಮೀಡಿಯಾ ಸಂಸ್ಥೆಯಡಿ ಗೀತಾ ಕೃಷ್ಣನ್ ರಾವ್ ಹಾಗೂ ಮುರಳಿರಾವ್ ಅವರು ಅಭಿವೃದ್ದಿಪಡಿಸಿರುವ ವೆಬ್ ಸೈಟ್ ಆಗಿದ್ದು ಇದರ ಮೂಲಕ ಯಾವುದೇ ಅಡೆತಡೆಗಳಿಲ್ಲದೆ, ಜಾಹೀರಾತು ಮುಕ್ತವಾಗಿ ತಮ್ಮ ನೆಚ್ಚಿನ ಚಲನಚಿತ್ರಗಳನ್ನು ವೀಕ್ಷಿಸಬಹುದಾಗಿದೆ.

ಈ ಬಗ್ಗೆ ಮಾಹಿತಿ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ, ಹಿರಿಯ ನಿರ್ದೇಶಕ, ನಿರ್ಮಾಪಕರಾದ ಓಂ ಸಾಯಿಪ್ರಕಾಶ್ ಹಾಗೂ ಎಸ್.ಎ.ಚಿನ್ನೇಗೌಡರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಶುಭ ಹಾರೈಸಿದರು.

ಓಟಿಟಿ ಪ್ಲೇಯರ್ ಬಗ್ಗೆ ಮಾಹಿತಿ ಹಂಚಿಕೊಂಡ, ಸಂಸ್ಥೆಯ ನಿರ್ದೇಶಕ‌ ಮುರಳಿರಾವ್ ಅವರು, ಇದೊಂದು ಪ್ರಯೋಗ, ಪ್ರಯತ್ನ. ನಿರ್ಮಾಪಕರೊಬ್ಬರು ನಮ್ಮನ್ನು ಭೇಟಿ ಮಾಡಿ ತಮ್ಮ ಕಷ್ಟ ಹೇಳಿಕೊಂಡಾಗ ಈ ಆಲೋಚನೆ ಬಂತು. ಈಗ ಎಲ್ಲರೂ ಓಟಿಟಿಯಲ್ಲಿ ಚಿತ್ರ ಯಾವಾಗ ಬರುತ್ತೆ ಅಂತ ಕಾಯುತ್ತಾರೆ. ನಮ್ಮ ವೆಬ್ ಸೈಟ್​​ಗೆ ಲಾಗಿನ್​​ ಆಗಿ ಅಲ್ಪದರ ಪಾವತಿಸಿ ಹೊಸ ಚಿತ್ರಗಳನ್ನು ನೋಡಬಹುದು. ಇದನ್ನು ಆನ್ ಲೈನ್ ಥೇಟರ್ ಅನ್ನಬಹುದು‌. ಬಂದ ಹಣದಲ್ಲಿ ನಿರ್ಮಾಪಕರಿಗೆ 70% ಶೇರ್ ಕೊಡುತ್ತೇವೆ. ಅಲ್ಲದೆ ಉತ್ತಮ ಕಿರು ಚಿತ್ರಗಳನ್ನು ಕೂಡ ನಮ್ಮ ವೆಬ್ ಸೈಟ್​​ನಲ್ಲಿ ಹಾಕುತ್ತೇವೆ ಎಂದು ತಿಳಿಸಿದರು.

ಹಿರಿಯ ನಿರ್ಮಾಪಕ ಚಿನ್ನೇಗೌಡ್ರು ಮಾತನಾಡಿ ಇಂಥ ಪ್ರಯತ್ನಗಳು ನಡೆದರೆ ಬಡ ನಿರ್ಮಾಪಕರಿಗೆ ಒಂದಷ್ಟು ಅನುಕೂಲವಾಗುತ್ತದೆ ಎಂದು ಹೇಳಿದರು.

ಇನ್ನು ನಿರ್ದೇಶಕ ಸಾಯಿಪ್ರಕಾಶ್ ಮಾತನಾಡುತ್ತ ರೆಗ್ಯುಲರ್ ಓಟಿಟಿಗಿಂತ ಇದು ವಿಭಿನ್ನವಾಗಿದೆ. ಎಲ್ಲಾ ಭಾಷೆಯ ಚಿತ್ರಗಳನ್ನು ನೋಡುವ ಅವಕಾಶ ಸಿಗುತ್ತದೆ‌. ಯಾವುದೇ ಹೊಸ ಸಿನಿಮಾ ಬಂದ ಕೂಡಲೇ ನಾನು ನೋಡುತ್ತೇನೆ. ಇದೊಂದು ಬಂಟಿಂಗ್ ಸ್ಟೇಜ್, ನಂತರ ಸಕ್ಸಸ್ ಆಗುತ್ತದೆ. ಇದರ ಬಗ್ಗೆ ಕ್ರೇಜ್ ಹುಟ್ಟಬೇಕಂದ್ರೆ ಒಳ್ಳೊಳ್ಳೆ ಸಿನಿಮಾ ಬರಬೇಕು ಎಂದು ಹೇಳಿದರು.

ಇದನ್ನೂ ಓದಿ : ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಬಾಂಬ್​ ಸದ್ದು.. ಮೂರು ಹೋಟೆಲ್​ಗಳಿಗೆ ಬಾಂಬ್​​ ಬೆದರಿಕೆ ಸಂದೇಶ..!

Leave a Comment

DG Ad

RELATED LATEST NEWS

Top Headlines

ಒಂದಲ್ಲ.. ಎರಡಲ್ಲ.. ಮೂರನೇ ಮದುವೆಯಾದ್ರಾ ಈ ಬಿಗ್ ಬಾಸ್ ಸ್ಪರ್ಧಿ.. ಯಾರು ಗೊತ್ತಾ?

‘ಇಬ್ಬರು ಹೆಂಡಿರ ಪತಿ’ ಎಂಬ ಕಾರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಫೇಮಸ್ ಆಗಿದ್ದ ಅರ್ಮಾನ್ ಮಲಿಕ್, ತಮ್ಮ ಪತ್ನಿಯರಾದ ಪಾಯಲ್ ಮಲಿಕ್ ಮತ್ತು ಕೃತಿಕಾ ಮಲಿಕ್ ಜೊತೆಗೆ

Live Cricket

Add Your Heading Text Here