ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಬಹು ನಿರೀಕ್ಷಿತ “45” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ.
ಈ ನಡುವೆ ಚಿತ್ರತಂಡದಿಂದ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. “45” ಚಿತ್ರದ ಆಡಿಯೋ ರೈಟ್ಸ್ ಅನ್ನು ಪ್ರತಿಷ್ಟಿತ ಆನಂದ್ ಆಡಿಯೋ ಸಂಸ್ಥೆಯವರು ಪಡೆದುಕೊಂಡದ್ದಾರೆ. ಚಿತ್ರದ ನಿರ್ದೇಶಕರೂ ಆಗಿರುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರೆ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಭಾರಿ ಮೊತ್ತಕ್ಕೆ ಆಡಿಯೋ ರೈಟ್ಸ್ ಮಾರಾಟವಾಗಿದ್ದು ಸದ್ಯದಲ್ಲೇ ಹಾಡುಗಳು ಬಿಡುಗಡೆಯಾಗಲಿದೆ.
ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು. ಈ ಚಿತ್ರಕ್ಕೆ ‘ಸೂರಜ್ ಪ್ರೊಡಕ್ಷನ್ಸ್’ ಮೂಲಕ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ.
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇದೇ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಸಿನಿಮಾ ’45’. ಈ ಸಿನಿಮಾ ಬಗ್ಗೆ ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಕುತೂಹಲವಿದೆ. ಅರ್ಜುನ್ ಜನ್ಯ ಅವರ ವಿಶಿಷ್ಟ ಕಾನ್ಸೆಪ್ಟ್‌ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ ದೊಡ್ಡ ಸ್ಟಾರ್ ಕಾಸ್ಟ್ ಟೀಮ್ ಕೂಡ ಇದೆ. ಹೀಗಾಗಿ ’45’ ಸಿನಿಮಾಗಾಗಿ ಪ್ರೇಕ್ಷಕರು ಎದುರು ನೋಡುತ್ತಿದ್ದಾರೆ.
ಇದನ್ನೂ ಓದಿ : ಮಂಡ್ಯ : ತೂಕದಲ್ಲಿ ಮೋಸ ಆರೋಪ – 3 ಆಭರಣ ಮಳಿಗೆಗಳಿಗೆ ಬೀಗ ಜಡಿದ ಅಧಿಕಾರಿಗಳು..!