Download Our App

Follow us

Home » ರಾಜಕೀಯ » ವಿಜಯಪುರ ಜಿಲ್ಲೆಯ ರೈತರಿಗೆ ಗುಡ್​ನ್ಯೂಸ್​​ – ವಕ್ಫ್​ ಗೊಂದಲಕ್ಕೆ ತೆರೆ ಎಳೆದ ಉಸ್ತುವಾರಿ ಸಚಿವ M.B ಪಾಟೀಲ್..!

ವಿಜಯಪುರ ಜಿಲ್ಲೆಯ ರೈತರಿಗೆ ಗುಡ್​ನ್ಯೂಸ್​​ – ವಕ್ಫ್​ ಗೊಂದಲಕ್ಕೆ ತೆರೆ ಎಳೆದ ಉಸ್ತುವಾರಿ ಸಚಿವ M.B ಪಾಟೀಲ್..!

ಬೆಂಗಳೂರು : ವಿಜಯಪುರ ಜಿಲ್ಲೆಯ ರೈತರಿಗೆ ಗುಡ್​ನ್ಯೂಸ್ ಸಿಕ್ಕಿದೆ. ​​ವಕ್ಫ್​ ಗೊಂದಲಕ್ಕೆ ಇದೀಗ ಜಿಲ್ಲೆಯ ಉಸ್ತುವಾರಿಯೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್​ ಅವರು ತೆರೆ ಎಳೆದಿದ್ದಾರೆ.   

ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ ಜಮೀನು ವಿವಾದಕ್ಕೆ ಸ್ಪಷ್ಟನೆ ನೀಡಿದ ಉಸ್ತುವಾರಿ ಸಚಿವ M.B ಪಾಟೀಲ್ ಅವರು, ಗೆಜೆಟ್‌ನಲ್ಲಿ ತಪ್ಪಾಗಿ ನಮೂದಿಸಿದ್ದರಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ 1,200 ಎಕರೆ ವಕ್ಫ್ ಆಸ್ತಿ ಎನ್ನುವ ಗೊಂದಲ ಸೃಷ್ಟಿಯಾಗಿದೆಯಷ್ಟೆ. ಇಲ್ಲಿ 11 ಎಕರೆ ಮಾತ್ರ ವಕ್ಫ್​​ಗೆ ಸೇರಿದ್ದು, ಇದರಲ್ಲಿ 10 ಎಕರೆ 14 ಗುಂಟೆಯಲ್ಲಿ ಖಬರಸ್ತಾನವಿದೆ. ಉಳಿದ 24 ಗುಂಟೆಯಲ್ಲಿ ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ. ಉಳಿದ ಜಮೀನೆಲ್ಲ ರೈತರಿಗೆ ಸೇರಿದೆ. ಇದನ್ನು ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಆ ಜಿಲ್ಲೆಯ ಉಸ್ತುವಾರಿಯೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ 1974, 1978 ಮತ್ತು 2016ರಲ್ಲಿ ವಕ್ಫ್ ಆಸ್ತಿಗಳ ಅಧಿಸೂಚನೆ ಹೊರಬಿದ್ದಿದೆ. ವಕ್ಫ್ ಆಸ್ತಿ ಇರುವುದು ವಿಜಯಪುರ ನಗರದ ವ್ಯಾಪ್ತಿಯಲ್ಲಿರುವ ಮಹಾಲಬಾಗಾಯತದಲ್ಲಿ. ಆದರೆ 1974ರ ಗೆಜೆಟ್​​ನಲ್ಲಿ ಮಹಾಲಬಾಗಾಯತದ ಪಕ್ಕ ಬ್ರ್ಯಾಕೆಟ್​​ನಲ್ಲಿ ಹೊನವಾಡ ಎಂದು ಬರೆದು ಬಿಟ್ಟಿದ್ದಾರೆ. ಈ ವಿಷಯವನ್ನು ರೈತರು ನಮ್ಮ ಗಮನಕ್ಕೆ ತಂದ ಕೂಡಲೇ ಅ.19ರಂದು ಜಿಲ್ಲಾಧಿಕಾರಿ, ತಹಸೀಲ್ದಾರ್ ಎಲ್ಲರನ್ನೂ ಕರೆದು, ಸಭೆ ನಡೆಸಿ, ಸೂಕ್ತ ನಿರ್ದೇಶನ ಕೊಟ್ಟಿದ್ದೇನೆ. ಈ ವಿಚಾರದಲ್ಲಿ ಬಿಜೆಪಿ ನಾಯಕರಾದ ತೇಜಸ್ವಿ ಸೂರ್ಯ ಅವರಾಗಲಿ, ಯತ್ನಾಳ್ ಅವರಾಗಲಿ ರಾಜಕೀಯ ಮಾಡಬೇಕಾಗಿಲ್ಲ. ರೈತರ ಒಂದಿಂಚು ಕೂಡ ವಕ್ಫ್ ಆಸ್ತಿ ಆಗಲು‌ ಬಿಡಲ್ಲ’ ಎಂದಿದ್ದಾರೆ.

ಇನ್ನು ಹೊನವಾಡ ಗ್ರಾಮವು ನಾನು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದಲ್ಲೇ ಇದೆ. ಇಲ್ಲಿನ ಹತ್ತು ಸರ್ವೇ ನಂಬರುಗಳಲ್ಲಿರುವ 11 ಎಕರೆ ಮಾತ್ರ ವಕ್ಫ್ ಆಸ್ತಿಯಷ್ಟೆ. 1974ರ ಗೆಜೆಟ್ ನಲ್ಲಿನ‌ ತಪ್ಪು ಗಳನ್ನು ವಕ್ಫ್ ಮಂಡಳಿಯೇ‌ 1977ರಲ್ಲಿ ತಿದ್ದುಪಡಿ ಮಾಡಿ, ಬ್ರಾಕೆಟ್ ನಲ್ಲಿದ್ದ ಹೊನವಾಡ ಹೆಸರನ್ನು ತೆಗೆದಿದೆ ಎಂದು ತಿಳಿಸಿದ್ದಾರೆ.

ಯಾವುದು ನಿಯಮಾನುಸಾರ ವಕ್ಫ್ ಆಸ್ತಿಯೋ ಅದಷ್ಟೇ ಅವರಿಗೆ ಸೇರುತ್ತದೆ. ರೈತರಾಗಲಿ, ಖಾಸಗಿ ಮಾಲೀಕರಾಗಲಿ ಈ ಬಗ್ಗೆ ಗೊಂದಲಕ್ಕೆ ಒಳಗಾಗಬೇಕಾಗಿಲ್ಲ. ಈ ಸಂಬಂಧ ನಾನು ಅಧಿಕಾರಿಗಳೊಂದಿಗೆ ಸದ್ಯದಲ್ಲೇ ಮತ್ತೊಂದು ಸಭೆ ನಡೆಸಿ ಗೊಂದಲ ಬಗೆಹರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಆನಂದ್ ಆಡಿಯೋದಲ್ಲಿ ’45’ ಚಿತ್ರದ ಸಾಂಗ್ಸ್​​ – ಭಾರಿ ಮೊತ್ತಕ್ಕೆ ಮಾರಾಟವಾಯಿತು ಮಲ್ಟಿಸ್ಟಾರರ್ ಸಿನಿಮಾದ ಆಡಿಯೋ ರೈಟ್ಸ್..!

Leave a Comment

DG Ad

RELATED LATEST NEWS

Top Headlines

ಮಗ ದರ್ಶನ್​ನ್ನು ನೋಡಲು ವಿಜಯಲಕ್ಷ್ಮಿ ನಿವಾಸಕ್ಕೆ ಬಂದ ತಾಯಿ ಮೀನಾ ತೂಗುದೀಪ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಅ.30ರಂದು ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಹಿನ್ನೆಲೆ ರಿಲೀಸ್ ಆಗಿದ್ದಾರೆ. 5 ತಿಂಗಳ ಜೈಲುವಾಸದ

Live Cricket

Add Your Heading Text Here