ಡೆತ್‌ನೋಟ್ ಬರೆದಿಟ್ಟು ಲಾಡ್ಜ್​ನಲ್ಲಿ ಉಪತಹಶೀಲ್ದಾರ್ ಆತ್ಮಹತ್ಯೆ!

ಹಾಸನ : ಉಪತಹಶೀಲ್ದಾರ್ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್.

ತಿಮ್ಮಯ್ಯ ಮೈಸೂರು ಜಿಲ್ಲೆ ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ. ಮೂರು ವರ್ಷಗಳ ಹಿಂದೆ ತಿಮ್ಮಯ್ಯ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೇ.30 ಲಾಡ್ಜ್‌ನಲ್ಲಿ 4 ಪುಟದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಹೊಂಬಾಳೆ ಮ್ಯೂಸಿಕ್​ನಲ್ಲಿ “ಭಾವಾಂತರ”ದ ಸಾಂಗ್ – ಟೀಸರ್​ನಲ್ಲೇ ಕುತೂಹಲ ಮೂಡಿಸಿದೆ‌ ಕಾರ್ತಿಕ್ ಶರ್ಮ ಚೊಚ್ಚಲ ನಿರ್ದೇಶನದ ಚಿತ್ರ!

Btv Kannada
Author: Btv Kannada

Leave a Comment

Read More

Read More