ಚಿಕ್ಕೋಡಿ : ಕಾಂಗ್ರೆಸ್ ಶಾಸಕ ರಾಜು ಕಾಗೆ ಮಂಗಸೂಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮರಾಠಿ ಭಾಷೆಯಲ್ಲಿ ಭಾಷಣ ಮಾಡಿದ್ದಾರೆ. ಕಾಂಗ್ರೆಸ್ ಶಾಸಕನ ಈ ನಡೆಗೆ ನೆಟ್ಟಿಗರು ತ್ರೀವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ಮರಾಠಿ ಭಾಷೆಯಲ್ಲಿ ಭಾಷಣ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾಗಾಗಿ ಗಡಿಯಲ್ಲಿ ಕರಾಳ ದಿನಾಚರಣೆ ಮಾಡದಂತೆ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ.
ಕನ್ನಡ ರಾಜ್ಯೋತ್ಸವಕ್ಕೆ 5ದಿನ ಬಾಕಿ ಇರುವಾಗಲೇ ಕೈ ಶಾಸಕನಿಗೆ ಮರಾಠಿ ಭಾಷಾಭಿಮಾನ ಹೆಚ್ಚಾಗಿದೆ. ಇದೀಗ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದನ್ನ ರಾಜು ಕಾಗೆ ಮರೆತೇ ಬಿಟ್ರಾ ಅನ್ನೊ ಚರ್ಚೆ ನಡೆಯುತ್ತಿದೆ. ಗಡಿಯಲ್ಲಿ ಕನ್ನಡಕ್ಕೆ ಹೆಚ್ಚು ಒತ್ತು ನೀಡಬೇಕಿದ್ದ ಕಾಗವಾಡ ಶಾಸಕನ ನಡೆಗೆ ಕನ್ನಡಿಗರು ಕೆಂಡಾಮಂಡಲವಾಗಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ – ಮನೆ ಮುಂದೆ ನಿಲ್ಲಿಸಿದ ಕಾರು ಜಖಂಗೊಳಿಸಿ ವ್ಯಕ್ತಿ ಮೇಲೆ ಹಲ್ಲೆ..!
Post Views: 54