ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರ ಹೈಕೋರ್ಟ್ ಅಕ್ಟೋಬರ್ 29ಕ್ಕೆ ಮುಂದೂಡಿದೆ.
ಇತ್ತೀಚಿಗೆ ಸೆಷನ್ಸ್ ಕೋರ್ಟ್ ನಟ ದರ್ಶನ್ ಅವರಿಗೆ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರು ಅನಾರೋಗ್ಯ ಕಾರಣ ನೀಡಿ ಹೈಕೋರ್ಟ್‌ಗೆ ತುರ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಆರೋಪಿ ದರ್ಶನ್ ಅವರ ಆರೋಗ್ಯದ ಬಗ್ಗೆ ಬಳ್ಳಾರಿ ಜೈಲು ಅಧಿಕಾರಿಗಳು ಸಲ್ಲಿಸಿದ ವರದಿಯನ್ನು ಪರಿಶೀಲಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಇದನ್ನೂ ಓದಿ : ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಭಗೀರಥ’ ನಾಯಕ – ಜಯಪ್ರಕಾಶ್ ಗೌಡ ನಟನೆಯ ಚಿತ್ರ ಶೀಘ್ರದಲ್ಲೇ ತೆರೆಗೆ..!
Post Views: 99