ಬೆಂಗಳೂರು : ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಬೋರ್ಡ್ನಿಂದ ನೋಟಿಸ್ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ವಕ್ಫ್ ಬೋರ್ಡ್ ವಿವಾದ 8 ಜಿಲ್ಲೆಗಳಿಗೆ ವಿಸ್ತರಿಸಿದೆ. ಇದರಿಂದ ಕೆರಳಿದ ರೈತರು ಹಲವು ದಿನಗಳಿಂದ ನಮ್ಮ ಭೂಮಿ ವಾಪಸ್ ಕೊಡಿಸಿ ಎಂದು ಜಿಲ್ಲೆಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದೀಗ ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ನೀಡಿದ ಹಿನ್ನಲೆ ನ.4ಕ್ಕೆ ರಾಜ್ಯಾದ್ಯಂತ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕರೆ ನೀಡಿದ್ದಾರೆ.
ನೊಂದ ರೈತರ ಜೊತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ತಹಶೀಲ್ದಾರ್ ಕಚೇರಿ ಮುಂದೆ ಹೋರಾಟ ನಡೆಸಲು ಸಜ್ಜಾಗಿರುವ ಬಿಜೆಪಿ ನಾಯಕರು, ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸಿರುವ ಪಹಣಿಗಳನ್ನ ಹಿಂಪಡೆಯಬೇಕು ಎಂದು ಒತ್ತಾಯಿಸಲಿದೆ.
ಅಷ್ಟೇ ಅಲ್ಲದೆ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ ಬಿಜೆಪಿ, ಸಚಿವ ಜಮೀರ್ ಅಹಮದ್ ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಹೋರಾಟ ನಡೆಸಲು ತೀರ್ಮಾನಿಸಿದೆ.
ಇದನ್ನೂ ಓದಿ : ಕಲಬುರಗಿ ಜಿಲ್ಲೆಗೂ ವ್ಯಾಪಿಸಿದ ವಕ್ಫ್ ಭೂಮಿ ವಿವಾದ – 45 ರೈತರಿಗೆ ನೋಟಿಸ್..!
Post Views: 44