ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ಗೆ 5 ತಿಂಗಳ ನಂತರ ಜಾಮೀನು ಸಿಕ್ಕಿದೆ. ದರ್ಶನ್‌ಗೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಕಾಮಾಕ್ಯ ದೇವಿಗೆ ಪತ್ನಿ ವಿಜಯಲಕ್ಷ್ಮಿ ಧನ್ಯವಾದ ತಿಳಿಸಿದ್ದಾರೆ.
ಪತಿಗೆ ಬೇಲ್ ಸಿಗುತ್ತಿದ್ದಂತೆ ಕಾಮಾಕ್ಯ ದೇವಸ್ಥಾನದ ಫೋಟೋ ಶೇರ್ ಮಾಡಿ ಥ್ಯಾಂಕ್‌ಫುಲ್, ಗ್ರೇಟ್‌ಫುಲ್, ಬ್ಲೆಸ್ಡ್ ಎಂದು ವಿಜಯಲಕ್ಷ್ಮಿ ಸಂತಸ ವ್ಯಕ್ತಪಡಿಸಿದ್ದಾರೆ. ದರ್ಶನ್ ಆದಷ್ಟು ಬೇಗ ಬಿಡುಗಡೆ ಆಗಲಿ ಎಂದು ಇತ್ತೀಚೆಗೆ ಕಾಮಾಕ್ಯ ದೇವಸ್ಥಾನಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ರನ್ನು ಜೂನ್ 11ರಂದು ಪೊಲೀಸರು ಬಂಧಿಸಿದ್ದು, ಸದ್ಯ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದನ್ನೂ ಓದಿ : ದರ್ಶನ್‌ಗೆ ಮಧ್ಯಂತರ ಜಾಮೀನು.. ಕೋರ್ಟ್ ವಿಧಿಸಿದ ಷರತ್ತುಗಳೇನು ಗೊತ್ತಾ?
Post Views: 167