IPL 2026 : ಗುಜರಾತ್ ವಿರುದ್ಧ ಭರ್ಜರಿ ಗೆಲುವು – ಸತತ ಎರಡನೇ ಬಾರಿ ಕಪ್ ಗೆದ್ದ RCB!

ಬೆಂಗಳೂರು : ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದು ಬೀಗಿದೆ. ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ (MI) ನಂತರ ಸತತ ಎರಡು ಬಾರಿ ಟ್ರೋಫಿ ಗೆದ್ದ ಮೂರನೇ ತಂಡ ಎಂಬ ಅಪ್ರತಿಮ ಕೀರ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭಾಜನವಾಗಿದೆ.

ಆರ್​ಸಿಬಿ ಭರ್ಜರಿ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆಯೇ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಬೌಲರ್‌ಗಳು ಆರಂಭದಿಂದಲೇ ಮೇಲುಗೈ ಸಾಧಿಸಿತ್ತು.

ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 155 ರನ್‌ಗಳಿಗೆ 8 ವಿಕೆಟ್ ಕಳೆದುಕೊಂಡಿತು. ಆರ್‌ಸಿಬಿ ಬೌಲರ್‌ಗಳ ಶಿಸ್ತುಬದ್ಧ ದಾಳಿಯಿಂದ ಗುಜರಾತ್ ಬ್ಯಾಟರ್‌ಗಳು ದೊಡ್ಡ ಮೊತ್ತ ಕಲೆಹಾಕಲು ವಿಫಲರಾದರು.

ಆರ್‌ಸಿಬಿಯ ಈ ಐತಿಹಾಸಿಕ ಕಪ್ ಗೆಲುವಿನಲ್ಲಿ ರನ್‌ ಮಷಿನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಅತ್ಯಂತ ನಿರ್ಣಾಯಕ ಪಾತ್ರ ವಹಿಸಿದರು. ವಿರಾಟ್ ಕೊಹ್ಲಿ ಆರಂಭಿಕ ಆಟಗಾರನಾಗಿ ಕ್ರೀಸ್‌ಗಿಳಿದು ಜಿಟಿ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಪಂದ್ಯದ ಮೊದಲ ಓವರ್‌ನಿಂದಲೇ ಮೈದಾನದ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗೈದ ಕೊಹ್ಲಿ ಅಜೇಯ 75 ರನ್‌(42 ಎಸೆತ, 9 ಬೌಂಡರಿ, 3 ಸಿಕ್ಸ್‌) ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು.

ಇದನ್ನೂ ಓದಿ : ಕರ್ನಾಟಕ ನೂತನ ಸಚಿವ ಸಂಪುಟ ಕಸರತ್ತು – ಇಲ್ಲಿದೆ ಸಂಭವನೀಯ ಸಚಿವರ ಸಂಪೂರ್ಣ ಪಟ್ಟಿ!

Btv Kannada
Author: Btv Kannada

Leave a Comment

Read More

Read More