ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸ್ಥಗಿತವಾಗುತ್ತದೆಯೇ ಎಂಬ ಸುದ್ದಿಗಳು ಹರಿದಾಡುತ್ತಿವೆ, ಇದರ ಬೆನ್ನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದರು.
ರಾಜ್ಯದಲ್ಲಿ ಜಾರಿಯಲ್ಲಿರುವ ಮಹಿಳೆಯರ ಶಕ್ತಿ ಯೋಜನೆ ಪರಿಷ್ಕರಣೆ ಉದ್ದೇಶ ಇಲ್ಲ. ಸದ್ಯದಲ್ಲಿ ಅಂತಹ ಯಾವುದೇ ಸರ್ಕಾರದ ಹಂತದಲ್ಲಿ ಇಲ್ಲ. ಕೆಲ ಮಹಿಳೆಯರು ಹಾಗೇ ಹೇಳಿದ್ದಾರೆ ಅಂತ ಹೇಳಿಕೆ ನೀಡಿದ್ದಾರೆ. ನಾನು ಇರಲಿಲ್ಲ ಆವಾಗ. ಆದ್ದರಿಂದ ರಾಜ್ಯದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.
ಇದನ್ನೂ ಓದಿ : ಬಳ್ಳಾರಿ ಜೈಲಿನಲ್ಲೂ ದರ್ಶನ್ಗೆ ಪ್ರಾಣಿ ಪ್ರೀತಿ – ಸದಾ ದಾಸನ ಹಿಂದೆಯೇ ಹೋಗ್ತಿತ್ತು ಬ್ಲ್ಯಾಕ್ ಡಾಗ್..!