ರಾಜ್ಯದಲ್ಲಿಂದು ಭಾರೀ ಮಳೆ – 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!​

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಲಿದ್ದು, ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. 

ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 

ಇದನ್ನೂ ಓದಿ : ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ ಡೈಮಂಡ್ ಅವಾರ್ಡ್!

Btv Kannada
Author: Btv Kannada

Leave a Comment

Read More