ಬೆಂಗಳೂರು : ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಕಸರತ್ತು ಜೋರಾಗಿದ್ದು, ಈ ನಡುವೆ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗಳಿಗೂ ಮುಹೂರ್ತ ನಿಗದಿಯಾಗಿದೆ.
ವಿಧಾನ ಪರಿಷತ್‌ನ ಏಳು ಸ್ಥಾನಗಳು ಹಾಗೂ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಜೂನ್ 18ರಂದು ಮತದಾನ ನಡೆಯಲಿದೆ.
ಅಧಿಸೂಚನೆಯಂತೆ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 11ರವರೆಗೆ ಉಮೇದುವಾರರು ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿದೆ.
ಜೂನ್ 18ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಸೌಧದಲ್ಲಿ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣಾ ಪ್ರಕ್ರಿಯೆ ಜೂನ್ 20ರೊಳಗೆ ಪೂರ್ಣಗೊಳ್ಳಲಿದೆ
ಇದನ್ನೂ ಓದಿ : ರುಕ್ಮಿಣಿ ವಸಂತ್ ಬಿಕಿನಿ ಫೋಟೋ ವೈರಲ್ – ಕಿಡಿಗೇಡಿಗಳ ವಿರುದ್ಧ FIR!
Author: Btv Kannada
Post Views: 235








