Download Our App

Follow us

Home » ರಾಜಕೀಯ » ಕಳೆದೆರಡು ಲೋಕಸಭಾ ಚುನಾವಣೆಗೆ ನೀಡಿದ್ದ ಪ್ರಣಾಳಿಕೆಯ ಜೊತೆ ಬಹಿರಂಗ ಚರ್ಚೆಗೆ ಬನ್ನಿ – ಮೋದಿಗೆ ಸಿದ್ದು ಸವಾಲ್​..!

ಕಳೆದೆರಡು ಲೋಕಸಭಾ ಚುನಾವಣೆಗೆ ನೀಡಿದ್ದ ಪ್ರಣಾಳಿಕೆಯ ಜೊತೆ ಬಹಿರಂಗ ಚರ್ಚೆಗೆ ಬನ್ನಿ – ಮೋದಿಗೆ ಸಿದ್ದು ಸವಾಲ್​..!

ಬೆಂಗಳೂರು : ನಾವು ಭರವಸೆ ಕೊಟ್ಟ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬಜೆಟ್​ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಹಣ ಇಟ್ಟಿದ್ದೇವೆ. ಹೆಚ್ಚುವರಿಯಾಗಿ 53,903 ಕೋಟಿ ಹಣ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರೇ ನಮ್ಮ ಸರ್ಕಾರದ ವಿರುದ್ಧ ಮಾತಾಡೋದಕ್ಕೂ ಮುನ್ನ ಕಳೆದ ನಿಮ್ಮ ಬಿಜೆಪಿ ಸರ್ಕಾರದ ಕಡೆ ನೋಡಿ. ಈ ಬಗ್ಗೆ ಸಾರ್ವಜನಿಕವಾಗಿಯೇ ಚರ್ಚೆ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ ವಿಚಾರವಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದಿದ್ದಾರೆ

ಪ್ರಧಾನಿ ಮೋದಿ ಅವರೇ, ಇಂದು ಕನ್ನಡ ರಾಜ್ಯೋತ್ಸವದ ದಿನ. “ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ” ಎಂದು ಸಾರಿದ ರಾಷ್ಟ್ರಕವಿ ಕುವೆಂಪು ಅವರ ಕಾವ್ಯವನ್ನು ನಾಡಗೀತೆಯಾಗಿ ಸ್ವೀಕರಿಸಿರುವ ಕರ್ನಾಟಕ, ಭಾರತಕ್ಕೆ ತಾಯಿಯ ಸ್ಥಾನವನ್ನು ನೀಡಿದೆ. ಇದೇ ಪ್ರೀತಿ ಮತ್ತು ಬದ್ಧತೆಯಿಂದ ಪ್ರಾಮಾಣಿಕವಾಗಿ ತಮ್ಮ ಬೆವರಗಳಿಕೆಯನ್ನು ತೆರಿಗೆಯಾಗಿ ನೀಡಿ ದೇಶದ ಬೊಕ್ಕಸವನ್ನು ತುಂಬಿದವರು ಕನ್ನಡಿಗರು.

ದೇಶದಲ್ಲಿ ಮಹಾರಾಷ್ಟ್ರದ ನಂತರ ಅತ್ಯಂತ ಹೆಚ್ಚು ನೇರ ತೆರಿಗೆ (11.9%) ಪಾವತಿಯಾಗಿರುವುದು ಕರ್ನಾಟಕ ರಾಜ್ಯದಲ್ಲಿ ಎನ್ನುವುದನ್ನು ಭಾರತೀಯ ಸ್ಟೇಟ್ ಬ್ಯಾಂಕ್ ವರದಿ ಒಪ್ಪಿಕೊಂಡಿರುವುದನ್ನು ನೀವು ಗಮನಿಸಿರಬಹುದೆಂದು ಭಾವಿಸಿದ್ದೇನೆ. ನರೇಂದ್ರ ಮೋದಿಯವರೇ, ಎಲ್ಲವನ್ನೂ ಪಕ್ಷ, ರಾಜಕೀಯದ ಹಳದಿ ಕನ್ನಡಕದಿಂದ ನೋಡುವ ಅಭ್ಯಾಸವನ್ನು ಬಿಟ್ಟು ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿ ಕರ್ನಾಟಕದ ಅಭಿವೃದ್ದಿ ಮಾದರಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ ಎಂದು ತಿರುಗೇಟು ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಡವರ ಕೈಗೆ ದುಡ್ಡು ಸಿಕ್ಕಿ ಅದು ಮಾರುಕಟ್ಟೆಗೆ ಹರಿದುಬಂದು ಅದರಿಂದ ತೆರಿಗೆ ಸಂಗ್ರಹವೂ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಬಲ ಬರಲಿದೆ ಎಂದು ಪ್ರಾರಂಭದಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಅದು ಇಂದು ನಿಜವಾಗಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು, ಆದರೆ ನೀವು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದೀರಿ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನು ಆಗಾಗ ನೀವು ಸುಳ್ಳು ಸಂಗತಿಗಳನ್ನು ಪೋಣಿಸಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದೀರಿ. ಈ “ತೂ ತೂ, ಮೈ ಮೈ” ಚರ್ಚೆಗೆ ತಾರ್ಕಿಕವಾದ ಅಂತ್ಯ ಹಾಡಿ ಬಿಡೋಣ. ಕಳೆದ ಎರಡು ಲೋಕಸಭಾ ಚುನಾವಣೆಯ ಮುನ್ನ ನಿಮ್ಮ ಪಕ್ಷ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯನ್ನು ಇಟ್ಟುಕೊಂಡು ಬಹಿರಂಗ ಚರ್ಚೆಯನ್ನು ಹಮ್ಮಿಕೊಳ್ಳೋಣ. ಪ್ರಣಾಳಿಕೆಯಲ್ಲಿ ನೀವು ಕೊಟ್ಟಿರುವ ಭರವಸೆಗಳಲ್ಲಿ ಎಷ್ಟನ್ನು ನೀವು ಈಡೇರಿಸಿದ್ದೀರಿ? ಎನ್ನುವುದನ್ನು ಸಾರ್ವಜನಿಕವಾಗಿಯೇ ಚರ್ಚೆ ಮಾಡೋಣ. ದೇಶದ ಪ್ರಜ್ಞಾವಂತ ಜನರೇ ಯಾರದ್ದು ಎಷ್ಟು ಸತ್ಯ? ಎಷ್ಟು ಸುಳ್ಳು? ಎನ್ನುವುದನ್ನು ತೀರ್ಮಾನಿಸಲಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಇಸ್ಪೀಟ್‌ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆ ಪೆಪ್ಪರ್‌ ಸ್ಪ್ರೇ ದಾಳಿ – 13 ಮಂದಿ ಅರೆಸ್ಟ್​..! 

Leave a Comment

DG Ad

RELATED LATEST NEWS

Top Headlines

ಶೃಂಗೇರಿ ಮಠದ ಜ್ಞಾನೋದಯ ಕಾಲೇಜು​ ಡೆಮಾಲಿಷನ್​​ಗೆ ತಡೆ – ಯಥಾಸ್ಥಿತಿಗೆ BBMP ಆದೇಶ..!

ಬೆಂಗಳೂರು : ರಾಜ್ಯ ಸರ್ಕಾರ ಶೃಂಗೇರಿಯ ಶಾರದ ಮಠದ ಅಧೀನದಲ್ಲಿ ನಡೆಯುತ್ತಿರೋ ಜ್ಞಾನೋದಯ ಕಾಲೇಜಿನ ಕಟ್ಟಡಕ್ಕೆ ಡೆಮಾಲಿಷನ್ ಆದೇಶ ನೀಡಿತ್ತು. ಈ ವಿಚಾರ ಹೊರ ಬರುತ್ತಿದ್ದಂತೆ ಸರ್ಕಾರದ

Live Cricket

Add Your Heading Text Here