ಬಿಜೆಪಿಗೆ ಅಣ್ಣಾಮಲೈ ದಿಢೀರ್ ರಾಜೀನಾಮೆ!

ಬೆಂಗಳೂರು : ತಮಿಳುನಾಡು ರಾಜಕಾರಣದಲ್ಲಿ ಅತ್ಯಂತ ಪ್ರಭಾವಶಾಲಿ ನಾಯಕ ಎಂದೇ ಗುರುತಿಸಿಕೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಮತ್ತು ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯಗಳ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರ ಈ ದಿಢೀರ್ ನಿರ್ಧಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ತಮಿಳುನಾಡಿನಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಅಣ್ಣಾಮಲೈ ಅವರು ‘ಎನ್ ಮಣ್ಣ್, ಎನ್ ಮಕ್ಕಳ್’ (ನನ್ನ ಮಣ್ಣು, ನನ್ನ ಜನ) ಪಾದಯಾತ್ರೆ ಸೇರಿದಂತೆ ಭಾರಿ ಹೋರಾಟ ನಡೆಸಿದ್ದರು. 

ಕಳೆದ ಕೆಲವು ದಿನಗಳಿಂದ ಅಣ್ಣಾಮಲೈ ದೆಹಲಿಯಲ್ಲೇ ಬೀಡುಬಿಟ್ಟಿದ್ದರು. ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ತಮಿಳುನಾಡು ರಾಜಕೀಯ ಸ್ಥಿತಿಗತಿಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದರು. ತಾವು ಬೇರೆ ಪಕ್ಷ ಕಟ್ಟುವ ಬಗ್ಗೆ ಪ್ರಶ್ನೆ ಬಂದಾಗಲೂ ಅವರು ಸ್ಪಷ್ಟವಾಗಿ ಉತ್ತಿರಿಸಿರಲಿಲ್ಲ. ಕಾದು ನೋಡಿ ಎಂದಷ್ಟೇ ಹೇಳಿದ್ದರು. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ಅಧಿಕೃತವಾಗಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ : ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ – ಅತಿಥಿಗಳಿಗೆ 3 ರೀತಿಯ ಪಾಸ್​​ ವಿತರಣೆ!

Btv Kannada
Author: Btv Kannada

Leave a Comment

Read More