Download Our App

Follow us

Home » ರಾಜ್ಯ » ಗಣರಾಜ್ಯೋತ್ಸವ – ರಾಜ್ಯದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ..!

ಗಣರಾಜ್ಯೋತ್ಸವ – ರಾಜ್ಯದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ..!

ಬೆಂಗಳೂರು : ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ರಕ್ಷಣಾ ದಳಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ಕರ್ನಾಟಕದ 21 ಮಂದಿ ಪೊಲೀಸರು ಅಧಿಕಾರಿಗಳು ಭಾಜನರಾಗಿದ್ದಾರೆ. ಶುಕ್ರವಾರ 75ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ ಎಡಿಜಿಪಿ ಸೌಮೇಂದ್ರ ಮುಖರ್ಜಿ ಹಾಗೂ ಡಿವೈಎಸ್​ಪಿ ಸುಧೀರ್ ಮಹದೇವ್ ಹೆಗ್ಡೆಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

ಗಮನಾರ್ಹ ಸೇವೆ ಗುರುತಿಸಿ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ. ಐಜಿಪಿ ಪ್ರವೀಣ್ ಮಧುಕರ್ ಪವಾರ್, ಐಜಿಪಿ ರಮಣ್ ಗುಪ್ತಾ, ಎಎಸ್​​ಪಿ ಅನಿಲ್​​ಕುಮಾರ್.ಎಸ್, ಎಸಿಪಿ ಶಿವಗಂಗೆ ಪುಟ್ಟರಂಗಪ್ಪ, ಡಿವೈಎಸ್​​ಪಿ ರಘು ಕುಮಾರ್, ಎಸಿಪಿ ನಾರಾಯಣಸ್ವಾಮಿ, ಡಿವೈಎಸ್​​ಪಿ ಶ್ರೀನಿವಾಸ್ ರಾಜ್ ಬೆಟೋಲಿ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಪೊಲೀಸ್​ ಇನ್ಸ್​​ಪೆಕ್ಟರ್​ ಮಾಸ್ತೇನಹಳ್ಳಿ ರಾಮಪ್ಪ ಹರೀಶ್, ಇನ್ಸ್​​ಪೆಕ್ಟರ್ ಸಣ್ಣ ರಂಗಪ್ಪ ವಿರೇಂದ್ರ ಪ್ರಸಾದ್, ಸಬ್​ ಇನ್ಸ್​​ಪೆಕ್ಟರ್ ದಾದಾಪೀರ್ ಕಣ್ಣೂರ್ ಸಾಬ್, ವೈರಲೆಸ್ ಎಎಸ್​ಐ​ ಸುರೇಶ್ ರಾಮಪ್ಪ ಪುಂಡಲಿಕಟ್ಟಿ, ಎಎಸ್ಐ ರಾಮ, ಎಸ್​​ಪಿ ಕಮಾಂಡೆಂಟ್ ಸಿಬ್ಬಂದಿ ನಾಗರಾಜ್ ಅಂಜಪ್ಪ, ಹೆಡ್​ ಕಾನ್ಸ್​ಟೇಬಲ್ ಸಿ.ವಿ.ಗೋವಿಂದರಾಜು, ಹೆಡ್​ ಕಾನ್ಸ್​ಟೇಬಲ್ ಮಣಿಕಂಠ ಮಂದರ್ ಬೈಲ್, ಎಎಸ್​ಐ​ ಸಮಂತ್.ಎಸ್, ಹೆಡ್​ ಕಾನ್ಸ್​ಟೇಬಲ್ ನರಸಿಂಹರಾಜು ಎಸ್.ಎನ್, ಎಸ್​ಐ ಪುಂಡಲಿಕ್ ಜೆ.ವಿ.ರಾಮರಾವ್ ನಾಯಕ್​ಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

ವಿಶಿಷ್ಟ ಸೇವಾ ಪದಕ ಭಾರತೀಯ ಸಶಸ್ತ್ರ ಪಡೆಗಳಲ್ಲಿ ನೀಡುವ ಒಂದು ಪ್ರಶಸ್ತಿಯಾಗಿದೆ. ಭಾರತೀಯ ಸಶಸ್ತ್ರ ಪಡೆಗಳ ಯಾವುದೇ ಶ್ರೇಣಿಗಳ ಹುದ್ದೆ ಹೊಂದಿರುವವರ ಉನ್ನತ ರೀತಿಯ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳು ನೀಡುತ್ತಾರೆ.

ಒಟ್ಟು 1132 ಸಿಬ್ಬಂದಿಗೆ ಮೆಡಲ್ – 2024 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ ಸೇವೆ, ಗೃಹ ರಕ್ಷಕ ಮತ್ತು ಸಿವಿಲ್ ಡಿಫೆನ್ಸ್ & ಕರೆಕ್ಷನಲ್ ಸೇವೆಯ ಒಟ್ಟು 1132 ಸಿಬ್ಬಂದಿಗೆ ಶೌರ್ಯ / ಸೇವಾ ಪದಕಗಳನ್ನು ಘೋಷಣೆ ಮಾಡಲಾಗಿದೆ. ವಿವಿಧ ಪ್ರಶಸ್ತಿಗಳ ಘೋಷಣೆ ವ್ಯವಸ್ಥೆಯನ್ನು ತರ್ಕಬದ್ಧಗೊಳಿಸಲು ಮತ್ತು ಪರಿವರ್ತಿಸಲು ಸರ್ಕಾರವು ಇತ್ತೀಚಿನ ವರ್ಷಗಳಲ್ಲಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ, ಹದಿನಾರು ಶೌರ್ಯ / ಸೇವಾ ಪದಕಗಳನ್ನು (ಪೊಲೀಸ್, ಅಗ್ನಿಶಾಮಕ ಸೇವೆ, ಗೃಹರಕ್ಷಕ ಮತ್ತು ಸಿವಿಲ್ ಡಿಫೆನ್ಸ್ & ಕರೆಕ್ಷನಲ್ ಸೇವೆ) ತರ್ಕಬದ್ಧಗೊಳಿಸಲಾಗಿದೆ ಮತ್ತು ನಾಲ್ಕು ಪದಕಗಳನ್ನು ವಿಲೀನಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಶೆಟ್ಟರ್​​ ಬೆನ್ನಲ್ಲೇ ಲಕ್ಷ್ಮಣ ಸವದಿ ಬಿಜೆಪಿ ಸೇರ್ತಾರಾ..?

Leave a Comment

DG Ad

RELATED LATEST NEWS

Top Headlines

ಸಿ.ಟಿ ರವಿ ಬಂಧಿಸಿ ಫೇಕ್​ ಎನ್​ಕೌಂಟರ್​ ಮಾಡೋ ಉದ್ದೇಶವಿತ್ತು ಅನ್ನಿಸುತ್ತೆ – ಪ್ರಹ್ಲಾದ್‌ ಜೋಶಿ ಸ್ಪೋಟಕ ಹೇಳಿಕೆ..!

ಬಾಗಲಕೋಟೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಬಂಧಿತರಾಗಿದ್ದ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಜಾಮೀನು ಪಡೆದು ಹೊರ ಬಂದಬಳಿಕ

Live Cricket

Add Your Heading Text Here