ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಸಂಜೆ 4.05ಕ್ಕೆ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಡಿಕೆಶಿ ಪ್ರಮಾಣವಚನ ಹಿನ್ನೆಲೆ ಲೋಕಭವನ ವ್ಯಾಪ್ತಿಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಭಾರಿ ಬದಲಾವಣೆಗಳನ್ನು ಮಾಡಿದ್ದಾರೆ.
ಕೆಲ ಪ್ರಮುಖ ರಸ್ತೆಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಾರ್ವಜನಿಕ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದಾರೆ.
- ಬಸವೇಶ್ವರ ವೃತ್ತದಿಂದ ಬಿಆರ್‌ವಿ ಜಂಕ್ಷನ್: ರಾಜಭವನ ರಸ್ತೆಯ ಈ ಮಾರ್ಗದಲ್ಲಿ ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ.
- ಪರ್ಯಾಯ ರಸ್ತೆಗಳು: ಕಬ್ಬನ್ ರಸ್ತೆ ಮಾರ್ಗವಾಗಿ ಚಲಿಸುವ ವಾಹನಗಳು ಬಿಆರ್‌ವಿ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಶಿವಾಜಿನಗರ, ಬಾಳೇಕುಂದ್ರಿ ವೃತ್ತದ ಕಡೆಗೆ ಸಾಗಬಹುದು. ಕ್ವೀನ್ಸ್ ರಸ್ತೆಯಿಂದ ಬರುವವರು ಬಾಳೇಕುಂದ್ರಿ ಜಂಕ್ಷನ್ ಮೂಲಕ ಕನ್ನಿಂಗ್‌ಹ್ಯಾಮ್ ರಸ್ತೆ ಬಳಸಲು ಸೂಚಿಸಲಾಗಿದೆ.
- ನೋ ಪಾರ್ಕಿಂಗ್ ವಲಯಗಳು: ರಾಜಭವನ ರಸ್ತೆ, ಕ್ವೀನ್ಸ್ ರಸ್ತೆ, ಪ್ಯಾಲೇಸ್ ರಸ್ತೆ, ಕಬ್ಬನ್ ರಸ್ತೆ, ಕಸ್ತೂರಬಾ ರಸ್ತೆ ಹಾಗೂ ಕಬ್ಬನ್ ಪಾರ್ಕ್‌ನ ಒಳಗಿನ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
- ಭಾರೀ ವಾಹನಗಳಿಗೆ ನಿಷೇಧ: ಇಡೀ ಬೆಂಗಳೂರು ನಗರದಾದ್ಯಂತ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಹಾಗೂ ದಿನನಿತ್ಯದ ವಾಹನ ಸವಾರರು ಈ ಟ್ರಾಫಿಕ್ ಅಡ್ವೈಸರಿಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣದ ಸಮಯ ಹಾಗೂ ಮಾರ್ಗವನ್ನು ಯೋಜಿಸಿಕೊಳ್ಳುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಇದನ್ನೂ ಓದಿ : ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಎಬ್ಬಿಸಲು ರೆಡಿಯಾದ ಕಿಚ್ಚ ಸೋದರಳಿಯ – ಜೂ.5ಕ್ಕೆ ‘ಮ್ಯಾಂಗೋ ಪಚ್ಚ’ ರಿಲೀಸ್!
Author: Btv Kannada
Post Views: 387









