ಬೆಂಗಳೂರು : ಇಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಜಿ. ಪರಮೇಶ್ವರ್ ರಾಜ್ಯದ ಮುಂದಿನ ಏಕೈಕ ಉಪ ಮುಖ್ಯಮಂತ್ರಿಯಾಗಲಿದ್ದಾರೆ.

ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಒಬ್ಬರು, ಇಬ್ಬರು, ಮೂವರು ಅಥವಾ ನಾಲ್ಕು ಉಪ ಮುಖ್ಯಮಂತ್ರಿಗಳಿರಬಹುದು ಎಂದು ವ್ಯಾಪಕ ಚರ್ಚೆ ನಡೆದಿತ್ತು. ಡಿಸಿಎಂ ಸ್ಥಾನಗಳ ಕುರಿತ ಹಲವು ದಿನಗಳ ಚರ್ಚೆಗಳಿಗೆ ಕೊನೆಗೂ ತೆರೆಬಿದ್ದಿದ್ದು, ಕಾಂಗ್ರೆಸ್ ಹೈಕಮಾಂಡ್ ಡಾ. ಜಿ. ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಡಿಕೆ ಶಿವಕುಮಾರ್ ಏಕೈಕ ಉಪಮುಖ್ಯಮಂತ್ರಿಯಾಗಿದ್ದರು. ಈಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿರುವ ಸಂದರ್ಭದಲ್ಲಿ ಡಾ. ಪರಮೇಶ್ವರ್ ಡಿಸಿಎಂ ಆಗುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ!
Author: Btv Kannada
Post Views: 363








