ಬೆಂಗಳೂರು : ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನಲೆ ಬೆಂಗಳೂರಿನ ಸಂಜಯ್‌ನಗರ ಠಾಣೆಯ ದಾಖಲಾಗಿದ್ದ, ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಇಂದು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
IPS ಅಧಿಕಾರಿ ಚಂದ್ರಶೇಖರ್ ಅವರಿಗೆ ಸುದ್ದಿಗೋಷ್ಟಿಯಲ್ಲಿ ಬೆದರಿಕೆ ಹಾಕಿರೋ ಆರೋಪ ಸಂಬಂಧ, ಚಂದ್ರಶೇಖರ್ ಕೊಟ್ಟ ದೂರಿನ ಹಿನ್ನೆಲೆ FIR ದಾಖಲಾಗಿತ್ತು. ಪ್ರಕರಣದಲ್ಲಿ ಹೆಚ್.ಡಿ ಕುಮಾರಸ್ವಾಮಿ A-1 ಆರೋಪಿ ಹಾಗೂ ನಿಖಿಲ್ ಕುಮಾರಸ್ವಾಮಿ A-2 ಆರೋಪಿ, ಸುರೇಶ್ ಬಾಬು A-3 ಆರೋಪಿ ಎಂದು ಉಲ್ಲೇಖಿಸಲಾಗಿದೆ.
ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ, ಅವರ ಪುತ್ರ ಹಾಗೂ ಹಾಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಹಾಗೂ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಅವರು ಎಫ್‌ಐಆರ್ ರದ್ದತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇನ್ನಷ್ಟೆ ವಿಚಾರಣೆಗೆ ಅರ್ಜಿ ಬರಬೇಕಿದೆ.
ಇದನ್ನೂ ಓದಿ : ‘ಟೆನಂಟ್’ ಸಿನಿಮಾದ ಟ್ರೇಲರ್ ರಿಲೀಸ್ – ನ.22ಕ್ಕೆ ಚಿತ್ರ ತೆರೆಗೆ..!