ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ – ತಪ್ಪಿದ ಭಾರಿ ದುರಂತ!

ಬೆಂಗಳೂರು : ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್​ ಕ್ಯಾಂಟರ್​ಗೆ ​​ಡಿಕ್ಕಿ ಹೊಡೆದಿರುವ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ.

ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ ಮಾರ್ಗಮಧ್ಯೆ ಕ್ಯಾಂಟರ್​ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಅದೃಷ್ಟವಶಾತ್​​ ಆ್ಯಂಬುಲೆನ್ಸ್​ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅಪಘಾತದ ನಡೆದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದು, ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಅಪಘಾತದ ತೀವ್ರತೆಗೆ ಆ್ಯಂಬುಲೆನ್ಸ್​​ ಮುಭಾಂಗ ಸಂಪೂರ್ಣ ಜಖಂ ಆಗಿದ್ದು, ಕ್ಯಾಂಟರ್​​ಗೂ ಅಲ್ಪ ಪ್ರಮಾಣದ ಡ್ಯಾಮೇಜ್​​ ಆಗಿದೆ.

ಇದನ್ನೂ ಓದಿ : ಎಸ್​ಐಆರ್ ಬಗ್ಗೆ ಎಚ್ಚರವಿರಲಿ, ಇಲ್ಲದಿದ್ದರೆ ಸಮಸ್ಯೆ ತಪ್ಪಿದ್ದಲ್ಲ – ಕಾರ್ಯಕರ್ತರಿಗೆ ಸಿಎಂ ಡಿಕೆಶಿ ಕರೆ!

Btv Kannada
Author: Btv Kannada

Leave a Comment

Read More

Read More